ಮುಂಬೈ(ಏ.15): ಐಪಿಎಲ್ ಟೂರ್ನಿಯಲ್ಲಿ ಮೊದಲ ಗೆಲುವಿನ ಸಿಹಿ ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಮುಂಬೈ ವಿರುದ್ಧವೂ ಗೆಲುವಿನ ವಿಶ್ವಾಸದಲ್ಲಿದೆ. ವಾಂಖೆಡೆಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ  ಮುಂಬೈ  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

12ನೇ ಆವೃತ್ತಿಯ ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಮುಗ್ಗರಿಸಿದ್ದ ಬೆಂಗಳೂರು ಇದೀಗ ತಿರುಗೇಟು ನೀಡಲು ಸಜ್ಜಾಗಿದೆ. RCB ಆಡಿದ 7ರಲ್ಲಿ 1 ಗೆಲುವು ಸಾಧಿಸಿದ್ದರೆ, ಮುಂಬೈ ಇಂಡಿಯನ್ಸ್ 7ರಲ್ಲಿ 4 ಗೆಲುವು ಹಾಗೂ 3 ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.