ಮುಂಬೈ(ಏ.03): ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರಂಭದಲ್ಲಿ ಎಡವಿದ ಮುಂಬೈ ಇಂಡಿಯನ್ಸ್ ಅಂತಿಮ ಹಂತದಲ್ಲಿ ಅಬ್ಬರಿಸಿದೆ.    ಸೂರ್ಯಕುಮಾರ್ ಯಾದವ್ ಹಾಗೂ ಕ್ರುನಾಲ್ ಪಾಂಡ್ಯ ಹೋರಾಟ ಹಾಗೂ ಹಾರ್ದಿಕ್ ಪಾಂಡ್ಯ ಅಬ್ಬರದಿಂದ ಮುಂಬೈ ಇಂಡಿಯನ್ಸ್, 5 ವಿಕೆಟ್ ನಷ್ಟಕ್ಕೆ 170 ರನ್ ಸಿಡಿಸಿದೆ. ಇದೀಗ ಸತತ 4ನೇ ಗೆಲುವಿನ ವಿಶ್ವಾಸದಲ್ಲಿರುವ CSK 171 ರನ್ ಟಾರ್ಗೆಟ್ ಚೇಸ್ ಮಾಡಲು ರೆಡಿಯಾಗಿದೆ.

ಟಾಸ್ ಸೋತು ಬ್ಯಾಟಿಂಗ್ ಇಳಿದ ಮುಂಬೈ 9 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಪತನಗೊಂಡಿತು. ಕ್ವಿಂಟನ್ ಡಿಕಾಕ್ 4 ರನ್ ಸಿಡಿಸಿ ನಿರ್ಗಮಿಸಿದರು. ನಾಯಕ ರೋಹಿತ್ ಶರ್ಮಾ 13 ರನ್‌ಗೆ ಔಟಾದರೆ, ಯುವರಾಜ್ ಸಿಂಗ್ ಕೇವಲ 4 ರನ್‌ಗೆ ಪೆವಿಲಿಯನ್ ಸೇರಿದರು. ಕುಸಿದ ತಂಡಕ್ಕೆ ಸೂರ್ಯಕುಮಾರ್ ಯಾದವ್ ಹಾಗೂ ಕ್ರುನಾಲ್ ಪಾಂಡ್ಯ ಆಸರೆಯಾದರು.

ಕ್ರುನಾಲ್ ಪಾಂಡ್ಯ 42 ರನ್ ಸಿಡಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಹಾಫ್ ಸೆಂಚುರಿ ಸಿಡಿಸಿದರು. ಯಾದವ್ ಹೋರಾಟಕ್ಕೆ 59 ರನ್  ಸಿಡಿಸಿ ಔಟಾದರು. ಆದರೆ ಹಾರ್ದಿಕ್ ಪಾಂಡ್ಯ ಕೇವಲ 8 ಎಸೆತದಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ ಅಜೇಯ 25 ರನ್ ಸಿಡಿಸಿದರೆ, ಕೀರನ್ ಪೊಲಾರ್ಡ್ ಅಜೇಯ 17 ರನ್ ಸಿಡಿಸಿದರು. ಹೀಗಾಗಿ ಮುಂಬೈ 5 ವಿಕೆಟ್ ನಷ್ಟಕ್ಕೆ 170 ರನ್ ಸಿಡಿಸಿತು.