ವಾಂಖೆಡೆ ಕ್ರೀಡಾಂಗಣಗದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು
ಮುಂಬೈ(ಮೇ.02): 12ನೇ ಆವೃತ್ತಿ ಐಪಿಎಲ್ ಟೂರ್ನಿ ಪ್ಲೇ ಆಫ್ ಸ್ಥಾನಕ್ಕಾಗಿ ಹೋರಾಟ ತೀವ್ರ ಕುತೂಹಲ ಕೆರಳಿಸಿದೆ. ಇದೀಗ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಗೆಲುವಿಗಾಗಿ ಕಠಿಣ ಹೋರಾಟ ನಡೆಸಲಿದೆ. ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ 12ರಲ್ಲಿ 7 ಗೆಲುವು ಹಾಗೂ 5 ಸೋಲು ಕಂಡಿದೆ. ಇತ್ತ ಹೈದರಾಬಾದ್ 12ರಲ್ಲಿ 6 ಗೆಲುವು ಹಾಗೂ 6 ಸೋಲಿನೊಂದಿಗೆ 4ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದ ಫಲಿತಾಂಶ ಉಭಯ ತಂಡಗಳಿಗೂ ಮುಖ್ಯವಾಗಿದೆ.
