ಬೆಂಗಳೂರು[ಮೇ.04]: 12ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ಅಂತಿಮ ಘಟ್ಟದಂತ ಸಾಗುತ್ತಿದೆ. ಏಪ್ರಿಲ್ 23ರಂದು ನಡೆದ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್’ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದೀಗ ಚೆನ್ನೈ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಯ ಸ್ಥಾನದಲ್ಲಿದೆ.

ಶುಕ್ರವಾರ ಮೊಹಾಲಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಕೋಲ್ಕತಾ ನೈಟ್’ರೈಡರ್ಸ್ ನಡುವೆ ನಡೆದ ಪಂದ್ಯದಲ್ಲಿ ಕೆಕೆಆರ್ ಅನಾಯಾಸವಾಗಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಈಗಾಗಲೇ ಚೆನ್ನೈ ಸೂಪರ್’ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇ ಆಫ್’ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದು, ಇದೀಗ ನಾಲ್ಕನೇ ಸ್ಥಾನಕ್ಕಾಗಿ ಸನ್’ರೈಸರ್ಸ್ ಹೈದರಾಬಾದ್, ರಾಜಸ್ಥಾನ ರಾಯಲ್ಸ್, ಕೋಲ್ಕತಾ ನೈಟ್’ರೈಡರ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ತೀವ್ರ ಹೋರಾಟ ನಡೆಸುತ್ತಿವೆ.

ಶನಿವಾರವಾದ ಇಂದು ರಾಜಸ್ಥಾನ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸುತ್ತಿದ್ದರೆ, ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸನ್’ರೈಸರ್ಸ್ ಹೈದರಾಬಾದ್ ತಂಡ ಕಾದಾಡಲಿದೆ.   

IPL ಅಂಕಪಟ್ಟಿ ಇಲ್ಲಿದೆ ನೋಡಿ...


(*03/05 ದಿನಾಂಕದ ವರೆಗೆ)