ಹೈದರಾಬಾದ್(ಮಾ.29): 12ನೇ ಆವೃತ್ತಿ ಐಪಿಎಲ್ ಟೂರ್ನಿ ರೋಚಕ ಪಂದ್ಯಕ್ಕೆ ಸಾಕ್ಷಿಯಾಗುತ್ತಿದೆ. ಹೈದಾರಾಬಾದ್ ಮೈದಾನದಲ್ಲಿ ನಡೆಯುತ್ತಿರುವ ಸನ್ ರೈಸರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದೆ. ಟಾಸ್ ಗೆದ್ದ ಗೆದ್ದಿರುವ  RR ಬ್ಯಾಟಿಂಗ್  ಆಯ್ಕೆ ಮಾಡಿಕೊಂಡಿದೆ. 

ಇದನ್ನೂ ಓದಿ: IPL 2019: ಕ್ರಿಸ್ ಗೇಲ್ ಅದ್ಭುತ ಡ್ಯಾನ್ಸ್- ನಾಚಿ ನೀರಾದ ಕೊರಿಯೋಗ್ರಾಫರ್!

2019ರ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ ರಾಯಲ್ಸ್ ಇಂದು ಗೆಲುವನ್ನು ಎದುರುನೋಡುತ್ತಿದೆ. ಹೀಗಾಗಿ ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ. ಬಲಿಷ್ಠ ತಂಡವನ್ನು ಕಣಕ್ಕಿಳಿಸಿರುವ SRH ಹಾಗೂ RR ಅಭಿಮಾನಿಗಳಿಗೆ ಮನರಂಜನೆ ನೀಡಲು ರೆಡಿಯಾಗಿದೆ.

ಇದನ್ನೂ ಓದಿ: ಯುವಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದಾಗ ಚಹಾಲ್‌ಗೆ ನೆನಾಪಾಗಿದ್ದು ಇವರು!

12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಸೋಲು ಕಂಡಿದ್ದರೆ, ರಾಜಸ್ಥಾನ ರಾಯಲ್ಸ್ , ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಮುಗ್ಗರಿಸಿತು.