ದೆಹಲಿ(ಮೇ.04): ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಅಂತಿಮ ಲೀಗ್ ಪಂದ್ಯಕ್ಕೆ ಸಜ್ಜಾಗಿದೆ. ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್  ಆಯ್ಕೆ ಮಾಡಿದೆ. ಸ್ಟೀವ್  ಸ್ಮಿತ್ ಅಲಭ್ಯರಾದ ಕಾರಣ ಮತ್ತೆ ಅಜಿಂಕ್ಯ ರಹಾನೆ ರಾಜಸ್ಥಾನ ತಂಡವನ್ನು ಮುನ್ನಡೆಸುತ್ತಿದ್ದಾರೆ. 

ಇದನ್ನೂ ಓದಿ: IPL ಅಂಕಪಟ್ಟಿ; ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್

ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆದಿದೆ. ಆದರೆ ಇಂದಿನ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನ ಪಡೆಯಲು ಸಜ್ಜಾಗಿದೆ. ಇತ್ತ ರಾಜಸ್ಥಾನ ರಯಾಲ್ಸ್ ತಂಡಕ್ಕೂ ಪ್ಲೇ ಆಫ್ ಅಕಾಶವಿದೆ. ಹೀಗಾಗಿ ಇಂದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.