ಮುಂಬೈ(ಏ.13): 12ನೇ ಐಪಿಎಲ್ ಟೂರ್ನಿಯ 27 ಲೀಗ್ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ.  ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಜಸ್ಥಾನ ರಾಯಲ್ಸ್  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ನಾಯಕ ರೋಹಿತ್ ಶರ್ಮಾ ತಂಡ ಸೇರಿಕೊಂಡಿದ್ದಾರೆ.  

ಮುಂಬೈ ಇಂಡಿಯನ್ಸ್ ಆಡಿದ 6 ಪಂದ್ಯಗಳಲ್ಲಿ 4 ರಲ್ಲಿ ಗೆಲುವು ಸಾಧಿಸೋ ಮೂಲಕ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಆದರೆ ರಾಜಸ್ಥಾನ ರಾಯಲ್ಸ್ ಕತೆ, ರಾಯಲ್ ಚಾಲೆಂಜರ್ಸ್ ತಂಡಕ್ಕಿಂತ ಭಿನ್ನವಾಗಿಲ್ಲ. ಆಡಿದ 6 ಪಂದ್ಯದಲ್ಲಿ RCB ವಿರುದ್ದದ ಪಂದ್ಯ ಹೊರತು ಪಡಿಸಿದರೆ ಉಳಿದೆಲ್ಲಾ ಪಂದ್ಯಗನ್ನು ಸೋತು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.