ಬೆಂಗಳೂರು(ಮಾ.28): ಐಪಿಎಲ್ ಟೂರ್ನಿಯಲ್ಲಿಂದು ಸೋತವರ ಸಮರ. ಮೊದಲ ಪಂದ್ಯದಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಇಂದು(ಮಾ.28) ಮುಖಾಮುಖಿಯಾಗುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ತೀವ್ರ ಕುತೂಹಲ ಕೆರಳಿಸುತ್ತಿದೆ.

ಇದನ್ನೂ ಓದಿ: ಚೊಚ್ಚಲ ಗೆಲುವಿನ ಕನವರಿಕೆಯಲ್ಲಿ RCB

ಬೆಂಗಳೂರು ಮೈದಾನ RCB ನಾಯಕ ವಿರಾಟ್ ಕೊಹ್ಲಿಗೆ ಹೋಮ್ ಗ್ರೌಂಡ್ ಆಗಿದ್ದರೆ, ಮುಂಬೈ ನಾಯಕ ರೋಹಿತ್ ಶರ್ಮಾಗೆ ಫೇವರಿಟ್ ಮೈದಾನ. ಹೀಗಾಗಿ ಇಂದು ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ. ಗೆಲುವಿನ ಹಳಿ ಮರಳಲು RCB ಬಲಿಷ್ಠ ತಂಡ ಕಣಕ್ಕಿಳಿಸಲು ನಿರ್ಧರಿಸಿದೆ. ಇಲ್ಲಿದೆ RCB ಸಂಭವನೀಯ ಪ್ಲೇಯಿಂಗ್ 11.

ಇದನ್ನೂ ಓದಿ: RCB ಪಂದ್ಯ: ಯೋಧರಿಗೆ ಟಿಕೆಟ್ ಉಚಿತ

RCB ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ಪಾರ್ಥೀವ್ ಪಟೇಲ್, ಎಬಿ ಡಿವಿಲಿಯರ್ಸ್ , ಮೊಯಿನ್ ಆಲಿ, ಶಿಮ್ರೊನ್ ಹೆಟ್ಮೆಯರ್, ಶಿವಂ ದುಬೆ, ಕೊಲಿನ್ ಡೇ ಗ್ರ್ಯಾಂಡ್‌ಹೊಮ್ಮೆ, ವಾಶಿಂಗ್ಟನ್ ಸುಂದರ್, ಉಮೇಶ್ ಯಾದವ್, ಯಜುವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್.