ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಹೋರಾಟ RCB ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಹೈದರಾಬಾದ್‌ನಲ್ಲಿ ಟಾಸ್ ಗೆದ್ದಿರುವ RCB ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ವಿವರ.
ಹೈದರಾಬಾದ್(ಮಾ.31): ಐಪಿಎಲ್ ಟೂರ್ನಿಯ ಆರಂಭಿಕ 2 ಪಂದ್ಯ ಸೋತು ನಿರಾಸೆ ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಗೆಲುವಿನ ವಿಶ್ವಾಸದಲ್ಲಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ನಡೆಯುತ್ತಿರುವ ಐಪಿಎಲ್ 11ನೇ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ RCB ಫೀಲ್ಡಿಂಗ್ ಆಯ್ಕೆ ಮಾಡಿದೆ.
ಇದನ್ನೂ ಓದಿ: ಆರ್ ಅಶ್ವಿನ್ ಮಂಕಡಿಂಗ್- ಕ್ರುನಾಲ್ ಪಾಂಡ್ಯ ಕಿಡ್ಡಿಂಗ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ನವದೀಪ್ ಶೈನಿ ಬದಲು ಕೇವಲ 16 ವರ್ಷದ ಹುಡುಗ ಪ್ರಯಾಸ್ ರೇ ಬರ್ಮನ್ ತಂಡ ಸೇರಿಕೊಂಡಿದ್ದಾರೆ. ಇನ್ನು ಸನ್ ರೈಸರ್ಸ್ ತಂಡದಲ್ಲಿ ನಾಯಕ ಕೇನ್ ವಿಲಿಯಮ್ಸನ್ ಇಂಜುರಿಗೆ ತುತ್ತಾಗಿದ್ದು, ಭುವನೇಶ್ವರ್ ಕುಮಾರ್ ನಾಯಕತ್ವ ವಹಿಸಿದ್ದಾರೆ.
ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಕಂಡ ಬೆಂಗಳೂರು, ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮುಗ್ಗರಿಸಿತು. ಹೀಗಾಗಿ ಇದೀಗ 3ನೇ ಪಂದ್ಯದಲ್ಲಿ ಗೆಲುವು ಸಾಧಿಸಲು ಈಗಾಗಲೇ ಎಲ್ಲಾ ತಯಾರಿ ಮಾಡಿಕೊಂಡಿದೆ. ಕೋಲ್ಕತಾ ವಿರುದ್ಧ ಮುಗ್ಗರಿಸಿದ್ದ ಹೈದರಾಬಾದ್ 2ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿತ್ತು.
