ಮೊಹಾಲಿ(ಏ.13): ಐಪಿಎಲ್ ಟೂರ್ನಿಯಲ್ಲಿ ಸತತ 6 ಪಂದ್ಯ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದ ಕಣಕ್ಕಿಳಿಯುತ್ತಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ  RCB ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.  

 

 

ಮೊಹಾಲಿ ಪಿಚ್‌ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಇಲ್ಲಿ ಮೊದಲು ಬ್ಯಾಟ್‌ ಮಾಡುವ ತಂಡ 180ಕ್ಕಿಂತ ಹೆಚ್ಚಿನ ಮೊತ್ತ ದಾಖಲಿಸಿದರೆ ಗೆಲ್ಲುವ ಸಾಧ್ಯತೆ ಹೆಚ್ಚಿರಲಿದೆ. ಈ ಆವೃತ್ತಿಯಲ್ಲಿ ನಡೆದಿರುವ ಮೂರೂ ಪಂದ್ಯಗಳಲ್ಲಿ ವೇಗಿಗಳು ಹೆಚ್ಚಿನ ಯಶಸ್ಸು ಸಾಧಿಸಿದ್ದಾರೆ. 5 ದಿನಗಳ ವಿಶ್ರಾಂತಿ ಬಳಿಕ ಕಣಕ್ಕಿಳಿಯಲಿರುವ ಆರ್‌ಸಿಬಿ, ಹೊಸ ಆರಂಭ ಕಂಡುಕೊಳ್ಳಲು ಕಾತರಿಸುತ್ತಿದೆ.