2019ರ ಐಪಿಎಲ್ ಟೂರ್ನಿಗಾಗಿ ಆರ್‌ಸಿಬಿ ಕೆಲ ಆಟಗಾರರನ್ನ ಕೈಬಿಟ್ಟಿದೆ. ಇದೀಗ ತಂಡದಿಂದ ಹೊರಬಿದ್ದ ಇಬ್ಬರು ಸ್ಟಾರ್ ಕ್ರಿಕೆಟಿಗರು ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.
ಕೇಪ್‌ಟೌನ್(ನ.17): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2019ರ ಐಪಿಎಲ್ ಟೂರ್ನಿಗೆ ತಯಾರಿ ಶುರು ಮಾಡಿದೆ. ಈಗಾಗಲೇ ತಂಡದ ಪ್ರಮುಖ 6 ಆಟಗಾರರನ್ನ ಕೈಬಿಟ್ಟಿದೆ. 11 ಆಟಗಾರರನ್ನ ತಂಡದಲ್ಲೇ ಉಳಿಸಿಕೊಂಡಿದೆ.ಟ
ತಂಡದಿಂದ ಹೊರಬಿದ್ದ ಸ್ಟಾರ್ ಆಟಗಾರರಾದ ಬ್ರೆಂಡನ್ ಮೆಕ್ಕಲಂ ಹಾಗೂ ಕೊರಿ ಆಂಡರ್ಸನ್ ಇದೀಗ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ. ಕಳೆದ ಐಪಿಎಲ್ ಆವೃತ್ತಿಯಲ್ಲಿ ಆಡಲು ಅವಕಾಶ ಮಾಡಿಕೊಟ್ಟ ನಾಯಕ ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿ ಫ್ರಾಂಚೈಸಿಗೆ ಮೆಕ್ಕಲಂ ಧನ್ಯವಾದ ಹೇಳಿದ್ದಾರೆ. ಇಷ್ಟೇ ಅಲ್ಲ ಈ ಆವೃತ್ತಿಯಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡಲಿ ಎಂದೂ ಹಾರೈಸಿದ್ದಾರೆ.
ಮತ್ತೊರ್ವ ನ್ಯೂಜಿಲೆಂಡ್ ಕ್ರಿಕೆಟಿಗ ಕೊರಿ ಆಂಡರ್ಸನ್ ಕೂಡ ಟ್ವೀಟ್ ಮಾಡಿದ್ದಾರೆ. ಆರ್‌ಸಿಬಿ ತಂಡ ಹಾಗೂ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತಂಡದಲ್ಲಿ ಅತ್ಯುತ್ತಮ ಅನುಭವ ಪಡೆದಿದ್ದೇನೆ. ಇಷ್ಟೇ ಅಲ್ಲ ಆರ್‌ಸಿಬಿ ಶ್ರೇಷ್ಠ ಫ್ರಾಂಚೈಸಿ. ಈ ಆವೃತ್ತಿಯಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಲಿ ಎಂದಿದ್ದಾರೆ.
ಬ್ರೆಂಡನ್ ಮೆಕ್ಕಲಂ ಹಾಗೂ ಕೋರಿ ಆಂಡರ್ಸನ್ ಸಂದೇಶಕ್ಕೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ರಿ ಟ್ವೀಟ್ ಮಾಡಿದೆ. ಇಷ್ಟೇ ಅಲ್ಲ ಇವರಿಬ್ಬರು ತಂಡಕ್ಕೆ ನೀಡಿದ ಕೊಡುಗೆಯನ್ನ ಸ್ಮರಿಸಿದೆ.
