ಮುಂಬೈ(ಮೇ.06): ಐಪಿಎಲ್ ಟೂರ್ನಿಯ ಪ್ರತಿ ಆವೃತ್ತಿಯ ಅಂತ್ಯದಲ್ಲಿ ಮುಂಬೈ ಇಂಡಿಯನ್ಸ್  ಅತ್ಯುತ್ತಮ ಪ್ರದರ್ಶನ ನೀಡಿದೆ. ಈ ಭಾರಿಯೂ ಮುಂಬೈ ತಂಡದ ಪ್ರದರ್ಶನ ನಿಜಕ್ಕೂ ಹೆಮ್ಮೆ ತರಿಸಿದೆ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಇದು ವೈಯುಕ್ತಿ ಪ್ರದರ್ಶನದಿಂದ ಸಾಧ್ಯವಾಗಿದ್ದಲ್ಲ, ತಂಡವಾಗಿ ಹೋರಾಡಿದ್ದೇವೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಕೆಕೆಆರ್ ವಿರುದ್ಧ ಗೆಲುವು-ಅಗ್ರಸ್ಥಾನಕ್ಕೆ ಮುಂಬೈ

ಕೋಲ್ಕತಾ ನೈಟ್ ರೈಡರ್ಸ್ ವಿರುದ್ದದ  ಅಂತಿಮ ಲೀಗ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಮುಂಬೈ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿತು. ಐಪಿಎಲ್ ಪ್ರಶಸ್ತಿ ಗೆದ್ದ ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್ ಆರಂಭಿಕ ಹಂತದಲ್ಲಿ ಸಾಧಾರಣ ಪ್ರದರ್ಶನ ನೀಡಿದೆ. ಆದರೆ ಟೂರ್ನಿಯ ಅಂತಿಮ ಹಂತದಲ್ಲಿ ಅತ್ಯುತ್ತಮ ಪ್ರದರ್ಶನದ ಮೂಲಕ ಪ್ಲೇ ಆಫ್ ಪ್ರವೇಶಿಸಿದೆ ಎಂದಿದ್ದಾರೆ. ಈ ಮೂಲಕ ಈ ಬಾರಿಯೂ ಮುಂಬೈ ಪ್ರಶಸ್ತಿ ಗೆಲ್ಲೋ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಟ್ರೋಫಿ ಗೆಲ್ಲೋ ನೆಚ್ಚಿನ ತಂಡ ಯಾವುದು? ಯುವರಾಜ್ ಸಿಂಗ್ ಭವಿಷ್ಯ!

ಮುಂಬೈ ಇಂಡಿಯನ್ಸ್ ಲೀಗ್ ಹಂತದ 14 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಹಾಗೂ 5ರಲ್ಲಿ ಸೋಲು ಅನುಭವಿಸಿದೆ. ಈ ಮೂಲಕ 18 ಅಂಕ ಸಂಪಾದಿಸಿ ಮೊದಲ ಸ್ಥಾನಕ್ಕೇರಿದೆ. 2ನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ 3 ಮತ್ತು 4ನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡ ಅಲಂಕರಿಸಿದೆ. ಮೇ.7 ರಿಂದ ಪ್ಲೇ ಆಫ್ ಪಂದ್ಯಗಳು ನಡೆಯಲಿದೆ.