ಹೈದರಾಬಾದ್(ಮಾ.31): ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅಬ್ಬರಿಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋ  ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಈ ಮೂಲಕ 12ನೇ ಆವೃತ್ತಿಯಲ್ಲಿ ಶತಕ ಸಿಡಿಸಿದ ಮೊದಲ ವಿದೇಶಿ ಆಟಗಾರ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಜಾನಿ ಬೈರ್‌ಸ್ಟೋ ಚೊಚ್ಚಲ ಐಪಿಎಲ್ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಕೇವಲ 52 ಎಸೆತದಲ್ಲಿ ಬೈರ್‌ಸ್ಟೋ ಸೆಂಚುರಿ ಪೂರೈಸಿದ್ದಾರೆ. ಇದು 12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ದಾಖಲಾದ 2ನೇ ಶತಕ. ಇದಕ್ಕೂ ಮೊದಲು ಸಂಜು ಸಾಮ್ಸನ್ ಸೆಂಚುರಿ ಸಿಡಿಸಿದ್ದರು.