ಹೈದರಾಬಾದ್(ಏ.17): ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯೂ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಇದೀಗ ಪ್ಲೇ ಆಫ್ ಹೊಸ್ತಿಲಲ್ಲಿರುವ CSK, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವಿನ ವಿಶ್ವಾಸದಲ್ಲಿದೆ. ಈ ಮೂಲಕ ಮೊದಲ ತಂಡವಾಗಿ ಪ್ಲೇ ಆಫ್ ಹಂತಕ್ಕೆ ಎಂಟ್ರಿ ಕೊಡಲು ಧೋನಿ ಸೈನ್ಯ ತುದಿಗಾಲಲ್ಲಿ ನಿಂತಿದೆ.

ಇದನ್ನೂ ಓದಿ: IPL 2019: ಸ್ಟುವರ್ಟ್ ಬಿನ್ನಿ ಅಬ್ಬರಿಸಿದರೂ ರಾಜಸ್ಥಾನಕ್ಕೆ ಸಿಗಲಿಲ್ಲ ಗೆಲುವು!

CSK ಆಡಿದ 8 ಪಂದ್ಯದಲ್ಲಿ 7 ರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮೊದಲ ಸ್ಥಾನದಲ್ಲಿದೆ. ಇದೀಗ ಇನ್ನೊಂದು ಗೆಲುವು ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇ ಆಫ್ ಸ್ಥಾನ ಖಚಿತಪಡಿಸಲಿದೆ. ಇದಕ್ಕಾಗಿ ಇಂದು(ಏ.17) ಹೈದರಾಬಾದ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಸನ್‌ರೈಸರ್ಸ್ ಸೋಲಿಸಿ ಇತಿಹಾಸ ರಚಿಸಲು ಮುಂದಾಗಿದೆ.

ಇದನ್ನೂ ಓದಿ: RCBಗೆ ಇನ್ನೂ ಇದೆಯಾ ಪ್ಲೇ ಆಫ್ ಅವಕಾಶ- ಚಹಲ್ ನೀಡಿದ್ರು ಉತ್ತರ!

ಇತ್ತ ಸನ್ ರೈಸರ್ಸ್ ಹೈದರಾಬಾದ್ CSKಗೆ ತಿರುಗೇಟು ನೀಡಲು ಸಜ್ಜಾಗಿದೆ. ಈಗಾಗಲೇ ಸತತ 3 ಸೋಲುಗಳಿಂದ ಕಂಗೆಟ್ಟಿರುವ ಹೈದರಾಬಾದ್ ಇದೀಗ ಚೆನ್ನೈ ವಿರುದ್ಧ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿದೆ. ಹೀಗಾಗಿ ಇಂದಿನ ಹೋರಾಟ ಅಭಿಮಾನಿಗಳಿಗೆ ಮನರಂಜನೆ ನೀಡಲಿದೆ.