ನವದೆಹಲಿ(ಮಾ.13): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಸಿಸಿಐಗೆ ಐಪಿಎಲ್‌ ವೇಳಾಪಟ್ಟಿ ಸಿದ್ಧಪಡಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೋಲ್ಕತಾ ನೈಟ್‌ ರೈಡ​ರ್ಸ್ ಹಾಗೂ ಮುಂಬೈ ಇಂಡಿಯನ್ಸ್‌ನ ಕೆಲ ತವರು ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎನ್ನಲಾಗಿದೆ. 

ಸದ್ದಿಲ್ಲದೇ ಮುಂಬೈ ತರಬೇತಿ ಶಿಬಿರ ಸೇರಿಕೊಂಡ ಟೀಂ ಇಂಡಿಯಾ ಕ್ರಿಕೆಟಿಗ!

ಪಶ್ಚಿಮ ಬಂಗಾಳದಲ್ಲಿ 7, ಮಹಾರಾಷ್ಟ್ರದಲ್ಲಿ 4 ಹಂತಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಭದ್ರತೆ ಸಮಸ್ಯೆ ಎದುರಾಗಲಿದ್ದು, ಕೆಲ ಪಂದ್ಯಗಳಿಗೆ ಬೇರೆ ನಗರಗಳನ್ನು ಆಯ್ಕೆ ಮಾಡಿಕೊಳ್ಳಲು ಫ್ರಾಂಚೈಸಿಗಳಿಗೆ ಸೂಚಿಸಲಾಗುತ್ತಿದೆ ಎನ್ನಲಾಗಿದೆ. ರಾಜ್‌ಕೋಟ್‌, ಇಂದೋರ್‌, ವಿಶಾಖಪಟ್ಟಣಂ, ಧರ್ಮಶಾಲಾ ಹಾಗೂ ಲಖನೌ ಕ್ರೀಡಾಂಗಣಗಳನ್ನು ಪಂದ್ಯ ಆಯೋಜಿಸಲು ಸಿದ್ಧಪಡಿಸುವಂತೆ ಆಯಾ ರಾಜ್ಯ ಕ್ರಿಕೆಟ್‌ ಸಂಸ್ಥೆಗಳಿಗೆ ಬಿಸಿಸಿಐ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಕೆಕೆಆರ್‌, ಮುಂಬೈ ಮಾತ್ರವಲ್ಲದೆ ಇನ್ನೂ ಒಂದೆರಡು ತಂಡಗಳ ಕೆಲ ತವರಿನ ಪಂದ್ಯಗಳು ಸ್ಥಳಾಂತರವಾಗುವ ಸಾಧ್ಯತೆ ಇದೆ. ಮುಂದಿನ ಒಂದೆರಡು ದಿನಗಳಲ್ಲಿ ಪೂರ್ಣ ವೇಳಾಪಟ್ಟಿಬಿಡುಗಡೆಗೊಳ್ಳುವ ನಿರೀಕ್ಷೆ ಇದೆ.

ಐಪಿಎಲ್ 2019ರ ವೇಳಾಪಟ್ಟಿ ಪ್ರಕಟ-ಉದ್ಘಾಟನಾ ಪಂದ್ಯದಲ್ಲಿ RCB -CSK ಫೈಟ್!

12ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಇದೇ ಮಾರ್ಚ್ 23ರಿಂದ ಆರಂಭವಾಗಲಿದ್ದು, ಹಾಲಿ ಚಾಂಪಿಯನ್ ಚೆನ್ನೈ ಸೂಪರ್’ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.