ಬೆಂಗಳೂರು(ಫೆ.16): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ ಕಳೆದ 11 ಆವೃತ್ತಿಗಳಲ್ಲಿ ಆರ್‌ಸಿಬಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ವೈಯುಕ್ತಿಕವಾಗಿ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ ಹಲವು ದಾಖಲೆ ನಿರ್ಮಿಸಿದ್ದಾರೆ. 2019ರಲ್ಲಿ ಕೊಹ್ಲಿ 3 ದಾಖಲೆ ಪುಡಿ ಮಾಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಐಪಿಎಲ್ 2019: ಎಂ.ಎಸ್.ಧೋನಿ ನಿರ್ಮಿಸಲಿದ್ದಾರೆ 4 ಅಪರೂಪದ ದಾಖಲೆ!

ಐಪಿಎಲ್‌ನಲ್ಲಿ ಗರಿಷ್ಠ ರನ್
ಐಪಿಎಲ್ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸಿಡಿಸಿದ ಪಟ್ಟಿಯಲ್ಲಿ ಸುರೇಶ್ ರೈನಾ ಹಾಗೂ ವಿರಾಟ್ ಕೊಹ್ಲಿ ನಡುವೆ ಪೈಪೋಟಿ ಇದೆ. ಸದ್ಯ ರೈನಾ ಐಪಿಎಲ್‌ನಲ್ಲಿ 4985 ರನ್ ಸಿಡಿಸಿದ್ದರೆ, ಕೊಹ್ಲಿ 4948 ರನ್ ಭಾರಿಸಿದ್ದಾರೆ. ಈ ಆವೃತ್ತಿಯಲ್ಲಿ ಕೊಹ್ಲಿ ಗರಿಷ್ಠ ರನ್ ದಾಖಲೆ ಬರೆಯುವ ಎಲ್ಲಾ ಸಾಧ್ಯತೆ ಇದೆ.

ಇದನ್ನೂ ಓದಿ:2019ರ ವಿಶ್ವಕಪ್‌ಗೆ 18 ಟೀಂ ಇಂಡಿಯಾ ಕ್ರಿಕೆಟಿಗರ ಪಟ್ಟಿ ರೆಡಿ!

ಐಪಿಎಲ್‌ನಲ್ಲಿ ಗರಿಷ್ಠ 50+ ಸ್ಕೋರ್ 
ಮೊದಲ ಆವೃತ್ತಿಯಿಂದ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದಾರೆ. 2016ರಲ್ಲಿ ಕೊಹ್ಲಿ 973 ರನ್ ಸಿಡಿಸಿ ದಾಖಲೆ ಬರೆದಿದ್ದಾರೆ. ಇದರಲ್ಲಿ 4 ಶತಕಗಳೂ ಸೇರಿವೆ. ಇದುವರೆಗೆ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ 38 ಬಾರಿ 50+ ಸ್ಕೋರ್ ದಾಖಲಿಸಿದ್ದಾರೆ. ಸದ್ಯ ಮೊದಲ ಸ್ಥಾನದಲ್ಲಿರುವ ಡೇವಿಡ್ ವಾರ್ನರ್ 39 ಬಾರಿ 0+ ಸ್ಕೋರ್ ಸಿಡಿಸಿದ್ದಾರೆ.

ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಬೆಂಗಳೂರು ಟಿ20 ಪಂದ್ಯ-ಎಲ್ಲಿ ಸಿಗಲಿದೆ ಟಿಕೆಟ್?

ಐಪಿಎಲ್‌ನಲ್ಲಿ ಗರಿಷ್ಠ ಶತಕ
ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 4 ಶತಕ ಸಿಡಿಸಿದ್ದಾರೆ. ಆದರೆ ವಿಂಡೀಸ್ ದೈತ್ಯ ಕ್ರಿಸ್ ಗೇಲ್ 6 ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದಾರೆ. ಈ ಆವೃತ್ತಿಯಲ್ಲಿ ಕೊಹ್ಲಿ ಗೇಲ್ ದಾಖಲೆ ಮುರಿಯುವ ಎಲ್ಲಾ  ಸಾಧ್ಯತೆಗಳಿವೆ.