ಚೆನ್ನೈ(ಮಾ.23): 12ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ CSK ಹಾಗೂ RCB ಶುಭಾರಂಭಕ್ಕಾಗಿ ಹೋರಾಟ ನಡೆಸುತ್ತಿದೆ. ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು, RCB ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿತು. ಆದರೆ RCB ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ: ಭಾರತೀಯ ಸೇನೆಗೆ IPL ಉದ್ಘಾಟನಾ ಸಮಾರಂಭದ 20 ಕೋಟಿ !

ಟಾಸ್ ಸಂದರ್ಭದಲ್ಲಿ ಪಾರ್ಥೀವ್ ಪಟೇಲ್ ಜೊತೆ ಆರಂಭಿಕನಾಗಿ ಕಣಕ್ಕಿಳುವುದಾಗಿ ನಾಯಕ ವಿರಾಟ್ ಕೊಹ್ಲಿ ಸ್ಪಷ್ಟಪಡಿಸಿದ್ದರು. ಆದರೆ ಕೊಹ್ಲಿ ಕೇವಲ 6 ರನ್  ಸಿಡಿಸಿ ಔಟಾದರು. ಈ ಮೂಲಕ ಈ ಭಾರಿಯ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲೇ ಕೊಹ್ಲಿ ನಿರಾಸೆ ಅನುಭವಿಸಿದ್ದಾರೆ.

ಇದನ್ನೂ ಓದಿ: ದ್ರಾವಿಡ್ To ಕೊಹ್ಲಿ: ಇಲ್ಲಿದೆ RCB ಕ್ಯಾಪ್ಟನ್ ಲಿಸ್ಟ್!

ಚೆನ್ನೈ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ 7 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ 6 ಭಾರಿ CSK ಗೆಲುವು ಸಾಧಿಸಿದ್ದರೆ, 2008ರ ಚೊಚ್ಚಲ ಆವೃತ್ತಿಯಲ್ಲಿ RCB ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.