12ನೇ ಆವೃತ್ತಿಯಯಲ್ಲಿ ಫೈನಲ್ ಪ್ರವೇಶಿಸೋ 2ನೇ ತಂಡ ಯಾವುದು? ಈ ಕುತೂಹಲಕ್ಕೆ ಇಂದು ಉತ್ತರ ಸಿಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ 2ನೇ ಕ್ವಾಲಿಫೈಯರ್ ಪಂದ್ಯ ಆರಂಭದಲ್ಲೇ ರೋಚಕತೆ ಹುಟ್ಟಿಸಿದೆ. ಟಾಸ್ ಗೆದ್ದಿರುವ ಚೆನ್ನೈ ಫೀಲ್ಡಿಂಗ್ ಆಯ್ಕೆ ಮಾಡಿದೆ.
ವಿಶಾಖಪಟ್ಟಣಂ(ಮೇ.10): 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಹೋರಾಟ ನಡೆಸಲಿರುವ ತಂಡ ಯಾವುದು? ಅನ್ನೋದು ಇಂದು ನಿರ್ಧಾರವಾಗಲಿದೆ. ವಿಶಾಖಪಟ್ಟಣಂದಲ್ಲಿ ನಡೆಯುತ್ತಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಡೆಲ್ಲಿ ಚೆನ್ನೈ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಚೆನ್ನೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮುರಳಿ ವಿಜಯ್ ಬದಲು ಶಾರ್ದೂಲ್ ಠಾಕೂರ್ ತಂಡ ಸೇರಿಕೊಂಡಿದ್ದಾರೆ.
ಇದನ್ನೂ ಓದಿ: CSK ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಮುಂಬೈ ಇಂಡಿಯನ್ಸ್!
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮುಗ್ಗರಿಸಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್ ಸೋಲು ಅನುಭವಿಸಿದ ಚೆನ್ನೈ, ಇದೀಗ ಫೈನಲ್ ಪ್ರವೇಶಿಸಲು ಡೆಲ್ಲಿ ವಿರುದ್ಧ ಹೋರಾಡಲಿದೆ. ಇತ್ತ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 2 ವಿಕೆಟ್ ರೋಚಕ ಗೆಲುವು ಸಾಧಿಸಿದ ಡೆಲ್ಲಿ, ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.
