ಹೈದರಾಬಾದ್(ಮೇ.12): ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರಂಭದಲ್ಲಿ ಅಬ್ಬರಿಸಿದ ಮುಂಬೈ ಇಂಡಿಯನ್ಸ್‌ಗೆ ಆಘಾತ ಎದುರಾಗಿದೆ. ಸ್ಫೋಟಕ ಬ್ಯಾಟಿಂಗ್ ಮೂಲಕ ಮುಂಬೈಗೆ ಭರ್ಜರಿ ಆರಂಭ ನೀಡಿದ ನಾಯಕ ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿಕಾಕ್ ವಿಕೆಟ್ ಪತನಗೊಂಡಿದೆ. ಈ ಮೂಲಕ ಮುಂಬೈ ಓಟಕ್ಕೆ ಚೆನ್ನೈ ಬ್ರೇಕ್ ಹಾಕಿದೆ.

ಇದನ್ನೂ ಓದಿ: IPL FINAL 2019: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್- 1 ಬದಲಾವಣೆ!

ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಮುಂಬೈ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್‌ಗೆ ರೋಹಿತ್ ಹಾಗೂ ಡಿಕಾಕ್ 45 ರನ್ ಜೊತೆಯಾಟ ನೀಡಿದರು. ಡಿಕಾಕ್ 17 ಎಸೆತದಲ್ಲಿ 4 ಸಿಕ್ಸರ್ ನೆರವಿನಿಂದ 29 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಕೂಡ ಪೆವಿಲಿಯನ್ ಸೇರಿದರು. ರೋಹಿತ್ 14 ಎಸೆತದಲ್ಲಿ 15 ರನ್ ಸಿಡಿಸಿ ಔಟಾದರು.