ಹೈದರಾಬಾದ್(ಮೇ.12): 12ನೇ ಆವೃತ್ತಿ ಐಪಿಎಲ್ ಟೂರ್ನಿ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡ ಪ್ರಶಸ್ತಿ ಗೆಲ್ಲೋ ವಿಶ್ವಾಸದಲ್ಲಿದೆ. ಈಗಾಗಲೇ ಟಾಸ್ ಗೆದ್ದಿರುವ ಮುಂಬೈ  ಬ್ಯಾಟಿಂಗ್  ಆಯ್ಕೆ ಮಾಡಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಜಯಂತ್ ಯಾದವ್ ಬದಲು ಮಿಚೆಲ್ ಮೆಕ್ಲೆನಾಘನ್ ತಂಡ ಸೇರಿಕೊಂಡಿದ್ದಾರೆ. ಆದರೆ ಚೆನ್ನೈ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

 

 

ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಹಾಗೂ ಮುಂಬೈ ಹೋರಾಟ ನಡೆಸಿತ್ತು. ಈ ಪಂದ್ಯದಲ್ಲಿ ಮುಂಬೈ 6 ವಿಕೆಟ್ ಗೆಲುವು ಸಾಧಿಸಿ ನೇರವಾಗಿ ಫೈನಲ್ ಪ್ರವೇಶಿಸಿತು. ಇನ್ನು ಸೋಲು ಕಂಡ ಚೆನ್ನೈ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶ ಪಡೆಯಿತು. ಇದೀಗ ಕ್ವಾಲಿಫೈಯರ್ ಹಾಗೂ ಲೀಗ್ ಹಂತದಲ್ಲಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಚೆನ್ನೈ ರೆಡಿಯಾಗಿದೆ.