ಹೈದರಾಬಾದ್(ಏ.21): ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿಂದು ತವರಿನ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ. ಈಗಾಗಲೇ ಟಾಸ್ ಗೆದ್ದಿರುವ SRH ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಕೆಕೆಆರ್ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ: ಐಪಿಎಲ್ ಬ್ರೇಕ್ ಬಗ್ಗೆ ತುಟಿಬಿಚ್ಚಿದ ಎಬಿಡಿ..

ಆತಿಥೇಯ ಸನ್ ರೈಸರ್ಸ್ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿದರೆ, ಇತ್ತ KKR ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಗ್ಗರಿಸಿತು. 8 ಪಂದ್ಯದಲ್ಲಿ 4 ಗೆಲುವು 4 ಸೋಲು ಕಂಡಿರುವ ಹೈದರಾಬಾದ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇತ್ತ ಕೆಕೆಆರ್ 9ರಲ್ಲಿ 4 ಗೆಲುವು 5 ಸೋಲು ಅನುಭವಿಸಿ 6ನೇ ಸ್ಥಾನದಲ್ಲಿದೆ.