Asianet Suvarna News Asianet Suvarna News

ICC ಟೆಸ್ಟ್ ಆಟಗಾರರ ಶ್ರೇಯಾಂಕ ಪ್ರಕಟ; ಬ್ಯಾನ್ ಆದ ಕ್ರಿಕೆಟಿಗ ಈಗಲೂ ನಂ.1..!

ಪಾಕಿಸ್ತಾನ ವಿರುದ್ಧ ಆಡಿದ ಚೊಚ್ಚಲ ಪಂದ್ಯದಲ್ಲಿಯೇ ಭರ್ಜರಿ ಶತಕ ಸಿಡಿಸಿದ ಕೆವಿನ್ ’ಓ’ ಬ್ರಿಯಾನ್ ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ 66ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಐರ್ಲೆಂಡ್’ನ ಥಿಮ್ ಮುರ್ಟಾಗ್ ಟಾಪ್ 100 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Ireland players make significant gains in latest ICC Test rankings

ದುಬೈ[ಮೇ.16]: ಐಸಿಸಿ ಟೆಸ್ಟ್ ಆಟಗಾರರ ನೂತನ ಶ್ರೇಯಾಂಕ ಪ್ರಕಟಗೊಂಡಿದ್ದು, ಪಾಕಿಸ್ತಾನ ವಿರುದ್ಧ ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಐರ್ಲೆಂಡ್ ಆಲ್ರೌಂಡರ್ ಕೆವಿನ್ ’ಓ’ ಬ್ರಿಯಾನ್ ಟಾಪ್ 100 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ಇನ್ನು ಬಾಲ್ ಟ್ಯಾಂಪರಿಂಗ್ ಮಾಡಿದ ತಪ್ಪಿಗೆ ಒಂದು ವರ್ಷದ ಮಟ್ಟಿಗೆ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ ಟೆಸ್ಟ್ ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲೇ ಮುಂದುವರೆದಿದ್ದಾರೆ.
ಪಾಕಿಸ್ತಾನ ವಿರುದ್ಧ ಆಡಿದ ಚೊಚ್ಚಲ ಪಂದ್ಯದಲ್ಲಿಯೇ ಭರ್ಜರಿ ಶತಕ ಸಿಡಿಸಿದ ಕೆವಿನ್ ’ಓ’ ಬ್ರಿಯಾನ್ ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ 66ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಐರ್ಲೆಂಡ್’ನ ಥಿಮ್ ಮುರ್ಟಾಗ್ ಟಾಪ್ 100 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಪಾಕಿಸ್ತಾನ ವಿರುದ್ಧ 6 ವಿಕೆಟ್ ಕಬಳಿಸಿದ ಮುರ್ಟಾಗ್ 67ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ಟಾಪ್ 10 ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ಹೆಚ್ಚಿನ ಬದಲಾವಣೆಗಳಾಗಿಲ್ಲ. ಸ್ಟೀವ್ ಸ್ಮಿತ್ ಮೊದಲ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ, ಜೋ ರೂಟ್, ಕೇನ್ ವಿಲಿಯಮ್ಸನ್, ಡೇವಿಡ್ ವಾರ್ನರ್ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ಹಾಶೀಂ ಆಮ್ಲಾ ಲಂಕಾದ ದಿನೇಶ್ ಚಾಂಡಿಮಲ್ ಹಿಂದಿಕ್ಕಿ 10ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ಇನ್ನು ಬೌಲಿಂಗ್’ನ ಟಾಪ್ 10 ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಆಫ್ರಿಕಾದ ಕಗೀಸೋ ರಬಾಡ ಮೊದಲ ಸ್ಥಾನದಲ್ಲಿದ್ದರೆ, ಜೇಮ್ಸ್ ಆ್ಯಂಡರ್’ಸನ್, ವೆರ್ನಾನ್ ಫಿಲಾಂಡರ್, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಮೊದಲ 5 ಸ್ಥಾನದಲ್ಲಿದ್ದಾರೆ.
ಕೊನೆಯದಾಗಿ ಆಲ್ರೌಂಡರ್ ವಿಭಾಗದಲ್ಲೂ ಯಾವುದೇ ಬದಲಾವಣೆಗಳಾಗಿಲ್ಲ. ಶಕೀಬ್ ಅಲ್ ಹಸನ್ ಮೊದಲ ಸ್ಥಾನದಲ್ಲಿದ್ದರೆ, ಜಡೇಜಾ, ಫಿಲಾಂಡರ್, ಅಶ್ವಿನ್ ಹಾಗೂ ಬೆನ್ ಸ್ಟೋಕ್ಸ್ ಅಗ್ರ 5ರ ಪಟ್ಟಿಯಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. 

Follow Us:
Download App:
  • android
  • ios