ಟೀಂ ಇಂಡಿಯಾದ ಆಫ್ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌ ಹೊಸ ಇನ್ನಿಂಗ್ಸ್‌ ಆರಂಭಿಸಲು ಸಜ್ಜಾಗಿದ್ದಾರೆ. ಮುಂಬರಲಿರುವ ಪಂಜಾಬ್‌ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಅಂತ ಹೇಳಲಾಗಿದೆ.
ನವದೆಹಲಿ (ಡಿ. 23): ಟೀಂ ಇಂಡಿಯಾದ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಹೊಸ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಮುಂಬರಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಅಂತ ಹೇಳಲಾಗಿದೆ. ಈಗಾಗಲೇ ಹರ್ಭಜನ್ ಅವರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದು , ಜಲಂಧರ್ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಹುರಿಯಾಳಾಗಿ ಕಣಕ್ಕಿಳಿಯುವ ಬಗ್ಗೆ ಚರ್ಚೆ ನಡೆಸಿದ್ದಾರಂತೆ.
ಇತ್ತೀಚೆಗೆ ಬಿಜೆಪಿ ತೊರೆದಿದ್ದ ಮಾಜಿ ಕ್ರಿಕೆಟಿಗ ನವ್ಜೋತ್ ಸಿಂಗ್ ಸಿಧು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಮೃತಸರ ಪೂರ್ವ ವಿಧಾನ ಸಭಾ ಕ್ಷೇತ್ರದಿಂದ ಅವರಿಗೆ ಟಿಕೇಟ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಬೆನ್ನಲ್ಲೇ ಹರ್ಭಜನ್ ಕೂಡ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಅಂತ ಮೂಲಗಳು ತಿಳಿಸಿವೆ..
