ನವದೆಹಲಿ(ಫೆ.14): ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪುಲ್ವಾಮ ಜಿಲ್ಲೆಯ ಅನಂತ್‌ಪುರ್‌ನಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಿದ್ದಾರೆ. ಉಗ್ರರ ಕೃತ್ಯದಿಂದ 40 CRPF ಯೋಧರು ಹುತಾತ್ಮರಾಗಿದ್ದಾರೆ. ಘಟನೆಯನ್ನ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಉಗ್ರವಾಗಿ ಖಂಡಿಸಿದ್ದಾರೆ. ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್ ಹಾಗೂ ಗೌತಮ್ ಗಂಭೀರ್ ಖಡಿಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರ ಮೇಲಿನ ದಾಳಿ ಸುದ್ದಿ ಅತ್ಯಂತ ನೋವು ತರಿಸಿದೆ. ನೋವನ್ನ ಹೇಳಲು ಪದಗಳು ಸಾಲುತ್ತಿಲ್ಲ. ಗಾಯಗೊಂಡಿರುವ ಯೋಧರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

 

 

ಪ್ರತ್ಯೇಕವಾದಿಗಳ ಜೊತೆ ಮಾತುಕತೆ, ಪಾಕಿಸ್ತಾನದ ಜೊತೆ ಮಾತುಕತೆ ಇನ್ನು ಸಾಕು. ನಮ್ಮ ಉತ್ತರ ರಣರಂಗದಲ್ಲಿ ಆಗಬೇಕು.  ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧರ ನೋವು ಸಹಿಸಲು ಆಗುತ್ತಿಲ್ಲ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.