RCB ಸಹಾಯಕ ಕೋಚ್ ಆಗಿ ಜಮ್ಮು ಕಾಶ್ಮೀರ ಮಾಜಿ ಕ್ರಿಕೆಟಿಗ ನೇಮಕ!

2019ರ ಐಪಿಎಲ್ ಟೂರ್ನಿಗೆ ತಯಾರಿ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ನೂತನ ಅಸಿಸ್ಟೆಂಟ್ ಕೋಚ್ ನೇಮಕ ಮಾಡಿದೆ. ಜಮ್ಮ ಮತ್ತು ಕಾಶ್ಮೀರದ ಮಾಜಿ ಕ್ರಿಕೆಟಿಗನ್ನ ಆಯ್ಕೆ ಮಾಡಿರುವ RCB ಇದೀಗ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ.
 

Jammu and kashmir former cricketer Mithun Manhas appointed as a RCB assistant coach

ಬೆಂಗಳೂರು(ಫೆ.13): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬರುವ ಐಪಿಎಲ್ ಆವೃತ್ತಿ ಈಗಾಗಲೇ ಅಭ್ಯಾಸ ಆರಂಭಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತರಬೇತಿ ಶಿಬಿರ ಆಯೋಜಿಸಿರುವ RCB ಇದೀಗ ತಂಡಕ್ಕೆ ನೂತನ ಅಸಿಸ್ಟೆಂಟ್ ಕೋಚ್ ನೇಮಕ ಮಾಡಿದೆ.

ಇದನ್ನೂ ಓದಿ: ಬಹಿರಂಗವಾಯ್ತು ಧೋನಿ ಹ್ಯಾಟ್ರಿಕ್ ಅರ್ಧಶತಕದ ರಹಸ್ಯ!

2019ರ ಐಪಿಎಲ್ ಟೂರ್ನಿಗೆ ಗ್ಯಾರಿ ಕರ್ಸ್ಟನ್ RCB ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಬೌಲಿಂಗ್ ಕೋಚ್ ಆಗಿ ಟೀಂ ಇಂಡಿಯಾ ಮಾಜಿ ವೇಗಿ ಆಶಿಶ್ ನೆಹ್ರಾ ಮಾರ್ಗದರ್ಶನ ನೀಡುತ್ತಿದ್ದಾರೆ. ಇದೀಗ ಸಹಾಯಕ ಕೋಚ್ ಆಗಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ನೇಮಕ ಮಾಡಲಾಗಿದೆ.

ಇದನ್ನೂ ಓದಿ: IPL ಟೂರ್ನಿಯಲ್ಲಿ ಗರಿಷ್ಠ ಸೆಂಚುರಿ ಸಿಡಿಸಿದ ಸಾಧಕರು!

157 ಪ್ರಥಮ ದರ್ಜೆ ಪಂದ್ಯಗಳಿಂದ ಮಿಥುನ್ 9714 ರನ್ ಸಿಡಿಸಿದ್ದಾರೆ. ಈ ಮೂಲಕ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸಿಡಿಸಿದ ಭಾರತದ 4ನೇ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ ಮಿಥುನ್  ಪಾತ್ರರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಮಿಥುನ್ ಮನ್ಹಾಸ್ ಡೆಲ್ಲಿ ಡೇರ್ ಡೆವಿಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗು ಪುಣೆ ವಾರಿಯರ್ಸ್ ಪರ ಆಡಿದ್ದಾರೆ.
 

Latest Videos
Follow Us:
Download App:
  • android
  • ios