ಲಾರ್ಡ್ಸ್ ಟೆಸ್ಟ್ ಆರಂಭಕ್ಕೂ ಮುನ್ನ ಭಾರತದ ಬೌಲಿಂಗ್ ವಿಭಾಗಕ್ಕೆ ಆಘಾತ!

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 7, Aug 2018, 6:23 PM IST
Jasprit bumrah officially ruled out of lords test
Highlights

ಮೊದಲ ಟೆಸ್ಟ್ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿ ವಿರೋಚಿತ ಸೋಲು ಕಂಡ ಟೀಂ ಇಂಡಿಯಾ 2ನೇ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿದೆ. ಆದರೆ ಪಂದ್ಯ ಆರಂಭಕ್ಕೆ ಇನ್ನೆರಡು ದಿನ ಇರುವಾಗಲೇ, ಆಘಾತ ಎದುರಾಗಿದೆ.

ಲಾರ್ಡ್ಸ್(ಆ.07): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬಳಿಕ ಲಾರ್ಡ್ಸ್ ಪಂದ್ಯಕ್ಕೆ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾಗೆ ಮತ್ತೆ ಆಘಾತ ಎದುರಾಗಿದೆ. ಇಂಜುರಿಯಿಂದ ಚೇತರಿಸಿಕೊಳ್ತಿದ್ದ ವೇಗಿ ಜಸ್‌ಪ್ರೀತ್ ಬುಮ್ರಾ ಲಾರ್ಡ್ಸ್ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ.

ಟೆಸ್ಟ್ ಸರಣಿಯಲ್ಲಿ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿರುವ ಟೀಂ ಇಂಡಿಯಾ, ಲಾರ್ಡ್ಸ್ ಪಂದ್ಯಕ್ಕೆ ತಂಡದಲ್ಲಿ ಕೆಲ ಬದಲಾವಣೆ ಮಾಡಲು ನಿರ್ಧರಿಸಿತ್ತು. ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಜಸ್‌ಪ್ರೀತ್ ಬುಮ್ರಾ ಆಯ್ಕೆ ಮಾಡಲು ಟೀಂ ಮ್ಯಾನೇಜ್ಮೆಂಟ್ ಮುಂದಾಗಿತ್ತು. ಆದರೆ ಬುಮ್ರಾ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ, ಲಾರ್ಡ್ಸ್ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಇಂಜುರಿಗೆ ತುತ್ತಾದ  ಜಸ್‌ಪ್ರೀತ್ ಬುಮ್ರಾ, ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಆದರೆ ಟೆಸ್ಟ್ ಸರಣಿಗೆ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿದ್ದರು. ಆದರೆ ಬುಮ್ರಾ ಶಸ್ತ್ರ ಚಿಕಿತ್ಸೆ ಬಳಿಕ ಸಂಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ. ಹೀಗಾಗಿ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ನೀಡೋ ಸಲುವಾಗಿ ಲಾರ್ಡ್ಸ್ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ.

loader