ಎರಡನೇ ಟೆಸ್ಟ್’ಗೂ ಟೀಂ ಇಂಡಿಯಾದ ಸ್ಟಾರ್ ವೇಗಿ ಔಟ್..!

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 8, Aug 2018, 10:59 AM IST
Jasprit Bumrah Out of Contention for Lord's Test
Highlights

ಈ ಮೊದಲು ಎಡಗೈ ಗಾಯದಿಂದ ಬುಮ್ರಾ ಸಂಪೂರ್ಣವಾಗಿ ಚೇತರಿಸಿಕೊಂಡರೆ 2ನೇ ಟೆಸ್ಟ್‌ಗೆ ಅವರನ್ನು ಆಯ್ಕೆಗೆ ಪರಿಗಣಿಸುವುದಾಗಿ ಬಿಸಿಸಿಐ ತಿಳಿಸಿತ್ತು. ಇನ್ನು ಎರಡನೇ ಪಂದ್ಯದಲ್ಲಿ ಉಮೇಶ್ ಬದಲಿಗೆ ಕುಲ್ದೀಪ್‌ರನ್ನು ಆಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಲಂಡನ್[ಆ.08]: ಇಂಗ್ಲೆಂಡ್ ವಿರುದ್ಧ ಗುರುವಾರ (ಆ.9)ದಿಂದ ಆರಂಭಗೊಳ್ಳಲಿರುವ 2ನೇ ಟೆಸ್ಟ್ ಪಂದ್ಯಕ್ಕೂ ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ ಎಂದು ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಭರತ್ ಅರುಣ್ ತಿಳಿಸಿದ್ದಾರೆ. 

ಈ ಮೊದಲು ಎಡಗೈ ಗಾಯದಿಂದ ಬುಮ್ರಾ ಸಂಪೂರ್ಣವಾಗಿ ಚೇತರಿಸಿಕೊಂಡರೆ 2ನೇ ಟೆಸ್ಟ್‌ಗೆ ಅವರನ್ನು ಆಯ್ಕೆಗೆ ಪರಿಗಣಿಸುವುದಾಗಿ ಬಿಸಿಸಿಐ ತಿಳಿಸಿತ್ತು. ಇನ್ನು ಎರಡನೇ ಪಂದ್ಯದಲ್ಲಿ ಉಮೇಶ್ ಬದಲಿಗೆ ಕುಲ್ದೀಪ್‌ರನ್ನು ಆಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಎಡ್ಜ್’ಬಾಸ್ಟನ್ ಟೆಸ್ಟ್’ನಲ್ಲಿ ಟೀಂ ಇಂಡಿಯಾದ ಸ್ಟಾರ್ ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಜಸ್’ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್’ನ 20 ವಿಕೆಟ್ ಪಡೆಯುವಲ್ಲಿ ಸಫಲವಾಗಿದ್ದರು. ಆರ್. ಅಶ್ವಿನ್ ಹಾಗೂ ಇಶಾಂತ್ ಶರ್ಮಾ ಬೌಲಿಂಗ್’ನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಬ್ಯಾಟ್ಸ್’ಮನ್’ಗಳ ವೈಫಲ್ಯದಿಂದ ಭಾರತ 31 ರನ್’ಗಳಿಂದ ರೋಚಕ ಸೋಲು ಅನುಭವಿಸಿತು. 

loader