ದಕ್ಷಿಣ ಆಫ್ರಿಕಾದ ಇಮ್ರಾನ್ ತಾಹಿರ್ ಅವರನ್ನು ಹಿಂದಿಕ್ಕಿರುವ ಪಾಕಿಸ್ತಾನದ ಸ್ಪಿನ್ನರ್ ಇಮಾದ್ ವಸೀಂ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಬಾರಿಗೆ ನಂ.1 ಸ್ಥಾನ ಅಲಂಕರಿಸಿದ್ದಾರೆ.

ದುಬೈ(ಜು.27): ಭಾರತದ ಯುವ ವೇಗಿ ಜಸ್ಪ್ರೀತ್ ಬುಮ್ರಾ ಇದೇ ಮೊದಲ ಬಾರಿಗೆ ಐಸಿಸಿ ಟಿ20 ಶ್ರೇಯಾಂಕ ಬೌಲರ್‌'ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಇದೇ ವೇಳೆ ಬ್ಯಾಟ್ಸ್‌ಮನ್ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.

ಇನ್ನು ಆಲ್ರೌಂಡರ್‌'ಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬಾಂಗ್ಲಾದೇಶದ ಆಟಗಾರ ಶಕೀಬ್ ಅಲ್ ಹಸನ್ ಆಲ್ರೌಂಡರ್‌'ಗಳ ಪೈಕಿ ಮೊದಲ ಸ್ಥಾನ ಹೊಂದಿದ್ದಾರೆ.

ದಕ್ಷಿಣ ಆಫ್ರಿಕಾದ ಇಮ್ರಾನ್ ತಾಹಿರ್ ಅವರನ್ನು ಹಿಂದಿಕ್ಕಿರುವ ಪಾಕಿಸ್ತಾನದ ಸ್ಪಿನ್ನರ್ ಇಮಾದ್ ವಸೀಂ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಬಾರಿಗೆ ನಂ.1 ಸ್ಥಾನ ಅಲಂಕರಿಸಿದ್ದಾರೆ.