Asianet Suvarna News Asianet Suvarna News

ಟೆಸ್ಟ್ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಮತ್ತೊಂದು ಹೊಡೆತ!

ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಅಂತಿಮ ಟಿ20 ಪಂದ್ಯದ ಸೋಲಿನಿಂದ ಚೇತರಿಸಿಕೊಳ್ಳುತ್ತಿರುವಾಗಲೇ ಈ ಶಾಕ್, ನಾಯಕ ವಿರಾಟ್ ಕೊಹ್ಲಿ ಚಿಂತೆ ಹೆಚ್ಚಿಸಿದೆ.

Jasprit bumrah ruled out from south africa test cricket series due to injury
Author
Bengaluru, First Published Sep 24, 2019, 5:45 PM IST

ಬೆಂಗಳೂರು(ಸೆ.23): ಸೌತ್ ಆಫ್ರಿಕಾ ವಿರುದ್ಧದ ಅಂತಿಮ ಟಿ20 ಪಂದ್ಯ ಸೋತ ಬಳಿಕ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 2 ರಿಂದ ವಿಶಾಖಪಟ್ಟಣಂದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಟೆಸ್ಟ್ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ ಭರ್ಜರಿ ಕಸರತ್ತು ನಡೆಸುತ್ತಿದೆ. ಆದರೆ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್‌ಪ್ರೀತ್ ಬುಮ್ರಾ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಇದನ್ನೂ ಓದಿ: ಟಿ20 ಪಂದ್ಯದ ಸೋಲಿನ ಬೆನ್ನಲ್ಲೇ ಕೊಹ್ಲಿಗೆ ಮತ್ತೊಂದು ಶಾಕ್!

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ(NCA) ಅಭ್ಯಾಸ ಮಾಡುತ್ತಿದ್ದ ಬುಮ್ರಾ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ದದ 3 ಪಂದ್ಯಗಳ ಟೆಸ್ಟ್ ಸರಣಿಯಿಂದ ಟೂರ್ನಿಯಿಂದ ರೂಲ್ಡ್ ಔಟ್ ಆಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ದದ 2 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 13 ವಿಕೆಟ್ ಪಡೆದು ಮಿಂಚಿದ ಬುಮ್ರಾ, ತವರಿನಲ್ಲಿ ಟೆಸ್ಟ್ ಪಂದ್ಯ ಆಡಲು ಕಾತರರಾಗಿದ್ದರು. 

ಇದನ್ನೂ ಓದಿ: ಕೇವಲ 12 ಮ್ಯಾಚ್: 85ರಿಂದ 3ನೇ ರ‍್ಯಾಂಕ್, ಇದು ಬುಮ್ರಾ ಝಲಕ್..!

ಸದ್ಯ ಬೆಂಗಳೂರಿನ NCAನಲ್ಲಿ ವೈದ್ಯರ ತಂಡ ಜಸ್‌ಪ್ರೀತ್ ಬುಮ್ರಾ ಇಂಜುರಿ ಕುರಿತು ನಿಗಾವಹಿಸಿದೆ. ಆಸ್ಟ್ರೇಲಿಯಾ ಪ್ರವಾಸ ಹಾಗೂ ಟಿ20 ವಿಶ್ವಕಪ್ ಟೂರ್ನಿ ದೃಷ್ಟಿಯಿಂದ ಬುಮ್ರಾ ಇಂಜುರಿಯನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಸಣ್ಣ ಇಂಜುರಿಗೆ ವಿಶ್ರಾಂತಿ ನೀಡಿದೆ. ಈ ಮೂಲಕ ಪ್ರಮುಖ ಸರಣಿಗೆ ಯಾವುದೇ ರಿಸ್ಕ್ ತೆಗೆದುಕೊಳ್ಳದಿರಲು ಬಿಸಿಸಿಐ ನಿರ್ಧರಿಸಿದೆ. 

ಇದನ್ನೂ ಓದಿ: ಭಜ್ಜಿ to ಬುಮ್ರಾ; 3 ಭಾರತೀಯರ ಹ್ಯಾಟ್ರಿಕ್ ವಿಕೆಟ್ ವಿಡಿಯೋ!

ಇದುವರೆಗೆ ವಿದೇಶಿ ಪಿಚ್‌ಗಳಲ್ಲಿ ಟೆಸ್ಟ್ ಪಂದ್ಯ ಆಡಿರುವ ಬುಮ್ರಾ, ತವರಿನಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯ ಆಡಲು ಸಜ್ಜಾಗಿದ್ದರು. ಆದರೆ ಇಂಜುರಿಯಿಂದ ಇದೀಗ ಬುಮ್ರಾ ತವರಿನಲ್ಲಿ ಟೆಸ್ಟ್ ಪಂದ್ಯ ಆಡಲು ಕಾಯಬೇಕಿದೆ. ಬುಮ್ರಾ ಬದಲು ವೇಗಿ ಉಮೇಶ್ ಯಾದವ್ ಆಯ್ಕೆಯಾಗಿದ್ದಾರೆ. 2018ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಪಂದ್ಯ ಆಡಿದ್ದ ಉಮೇಶ್ ಯಾದವ್, ಬಳಿಕ ತಂಡಕ್ಕೆ ಆಯ್ಕೆಯಾಗಿದ್ದರೂ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡೋ ಅವಕಾಶ ಪಡೆದಿರಲಿಲ್ಲ. ಇದೀಗ ಬುಮ್ರಾ ಇಂಜುರಿಯಿಂದ ಉಮೇಶ್ ಮತ್ತೆ ಟೀಂ ಇಂಡಿಯಾ ಸೇರಿಕೊಳ್ಳುತ್ತಿದ್ದಾರೆ. 

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್; ಇಲ್ಲಿದೆ ನಿಯಮ, ವೇಳಾಪಟ್ಟಿ ವಿವರ!

ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ಇದೀಗ ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಪ್ರಮುಖ ವೇಗಿಗಳಾಗಿದ್ದಾರೆ. 

Follow Us:
Download App:
  • android
  • ios