ಲಂಡನ್‌(ಜು.06): ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿರುವ ಟೀಂ ಇಂಡಿಯಾ ಆಘಾತ ಎದುರಾಗಿದೆ. ಹೆಬ್ಬೆರಳು ಗಾಯದಿಂದ ಇಂಗ್ಲೆಂಡ್ ವಿರುದ್ದದ ಟಿ20 ಟೂರ್ನಿಯಿಂದ ಹೊರಗುಳಿದಿದ್ದ ವೇಗಿ ಜಸ್‌ಪ್ರೀತ್ ಬುಮ್ರಾ, ಇದೀಗ ಏಕದಿನ ಸರಣಿಗೂ ಅಲಭ್ಯರಾಗಿದ್ದಾರೆ.

ಜಸ್‌ಪ್ರೀತ್ ಬುಮ್ರಾ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ ಎಂದು ತಂಡದ ಮೂಲಗಳು ತಿಳಿಸಿವೆ. ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಬುಮ್ರಾಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆ ಇದೆ.

ಇಂಗ್ಲೆಂಡ್ ವಿರುದ್ಧದ 3 ಟಿ20 ಪಂದ್ಯದ ಬಳಿಕ ಜುಲೈ 12 ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ. ಇನ್ನೊಂದು ವಾರದಲ್ಲಿ ಬುಮ್ರಾ ಸಂಪೂರ್ಣ ಚೇತರಿಸಿಕೊಳ್ಳೋದು ಅನುಮಾನ ಎನ್ನಲಾಗುತ್ತಿದೆ.