ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕುಕ್ಕೆ ಸುಬ್ರಹ್ಮಣ್ಯ ದರ್ಶನ ಪಡೆದ ಕ್ರಿಕೆಟಿಗ ಕೆಎಲ್ ರಾಹುಲ್

K L Rahul offers prayers at Kukke Subrahmanya
Highlights

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಕೆಎಲ್ ರಾಹುಲ್ ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಬಳಿ ಪ್ರತಿ ಸರಣಿಯಲ್ಲೂ ರಾಹುಲ್ ಉತ್ತಮ ಪ್ರದರ್ಶನ ನೀಡಿದ್ದಾರೆ.

ಸುಬ್ರಹ್ಮಣ್ಯ(ಜೂ.22): ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ತೆರಳೋ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪ್ರತಿ ಸರಣಿಗೂ ಮುನ್ನ ದೇವಸ್ಛಾನಕ್ಕೆ ಭೇಟಿ ನೀಡೋ ರಾಹುಲ್, ಇದೀಗ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಪಡೆದರು.

ಐಪಿಎಲ್ ಟೂರ್ನಿಗೂ ಮುನ್ನ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ರಾಹುಲ್, ಭರ್ಜರಿ ಪ್ರದರ್ಶನ ನೀಡಿದ್ದರು. ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನಸೆಳೆದಿದ್ದರು. ಇದೀಗ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 

ದೇವಸ್ಥಾನಕ್ಕೆ ಆಗಮಿಸಿದ ಕೆಎಲ್ ರಾಹುಲ್‌ಗೆ ಆಡಳಿತ ಮಂಡಳಿ ಸನ್ಮಾನಿಸಿತು. ರಾಹುಲ್ ಜೊತೆಗೆ ತಂದೆ ಕೆಎನ್ ಲೋಕೇಶ್ ಹಾಗೂ ತಾಯಿ ರಾಜೇಶ್ವರಿ ಕೂಡ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಜೂನ್ 27,29 ರಂದು ಐರ್ರೆಲೆಂಡ್ ವಿರುದ್ಧ ಭಾರತ 2 ಟಿ-ಟ್ವೆಂಟಿ ಪಂದ್ಯ ಆಡಲಿದೆ. ಬಳಿಕ ಜುಲೈ  3 ರಿಂದ ಇಂಗ್ಲೆಂಡ್ ವಿರುದ್ಧದ 3 ಟಿ-ಟ್ವೆಂಟಿ ಹಾಗೂ 3 ಏಕದಿನ ಪಂದ್ಯ ಆರಂಭಗೊಳ್ಳಲಿದೆ. ನಿಗಧಿತ ಓವರ್ ಕ್ರಿಕೆಟ್ ಬಳಿಕ ಆಗಸ್ಟ್ 1 ರಿಂದ 5 ಪಂದ್ಯದ ಟೆಸ್ಟ್ ಸರಣಿ ಆರಂಭವಾಗಲಿದೆ.

loader