2015ರಲ್ಲಿ ಸನ್'ರೈಸರ್ಸ್ ಹೈದರಾಬಾದ್ ತಂಡ ಕೂಡಿಕೊಂಡಿರುವ ಕೇನ್ ವಿಲಿಯಮ್ಸನ್ ಮೂರು ಆವೃತ್ತಿಗಳಿಂದ 411 ರನ್ ಸಿಡಿಸಿದ್ದಾರೆ. ಈ ಬಾರಿ ನಾಯಕನಾಗಿ ಆಯ್ಕೆಯಾಗಿರುವುದಕ್ಕೆ ಸಂತೋಷವಾಗುತ್ತಿದೆ. ಪ್ರತಿಭಾನ್ವಿತ ಆಟಗಾರರನ್ನೊಳಗೊಂಡ ತಂಡವನ್ನು ಮುನ್ನಡೆಸಲು ಇದೊಂದು ಅದ್ಭುತ ಅವಕಾಶವಾಗಿದೆ ಎಂದು ವಿಲಿಯಮ್ಸನ್ ಹೇಳಿದ್ದಾರೆ.
ಹೈದರಾಬಾದ್(ಮಾ.29): ಚೆಂಡು ವಿರೂಪಗೊಳಿಸಿದ ಪ್ರಕರಣದಡಿ ಒಂದು ವರ್ಷ ನಿಷೇಧಕ್ಕೊಳಗಾಗಿರು ಡೇವಿಡ್ ವಾರ್ನರ್ ಬದಲಿಗೆ ಸನ್'ರೈಸರ್ಸ್ ಹೈದರಾಬಾದ್ ತಂಡವನ್ನು ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಮುನ್ನಡೆಸಲಿದ್ದಾರೆ.
ಕೇನ್ ವಿಲಿಯಮ್ಸನ್ ಅವರನ್ನು ಸನ್'ರೈಸರ್ಸ್ ಹೈದರಾಬಾದ್ ತಂಡದ ನಾಯಕರನ್ನಾಗಿ ಘೋಷಿಸುತ್ತಿರುವುದಕ್ಕೆ ಸಂತೋಷವಾಗುತ್ತದೆ ಎಂದು ಸನ್'ರೈಸರ್ಸ್ ತಂಡದ ಸಿಇಓ ಕೆ. ಷಣ್ಮುಗಂ ಹೇಳಿದ್ದಾರೆ.
2015ರಲ್ಲಿ ಸನ್'ರೈಸರ್ಸ್ ಹೈದರಾಬಾದ್ ತಂಡ ಕೂಡಿಕೊಂಡಿರುವ ಕೇನ್ ವಿಲಿಯಮ್ಸನ್ ಮೂರು ಆವೃತ್ತಿಗಳಿಂದ 411 ರನ್ ಸಿಡಿಸಿದ್ದಾರೆ. ಈ ಬಾರಿ ನಾಯಕನಾಗಿ ಆಯ್ಕೆಯಾಗಿರುವುದಕ್ಕೆ ಸಂತೋಷವಾಗುತ್ತಿದೆ. ಪ್ರತಿಭಾನ್ವಿತ ಆಟಗಾರರನ್ನೊಳಗೊಂಡ ತಂಡವನ್ನು ಮುನ್ನಡೆಸಲು ಇದೊಂದು ಅದ್ಭುತ ಅವಕಾಶವಾಗಿದೆ ಎಂದು ವಿಲಿಯಮ್ಸನ್ ಹೇಳಿದ್ದಾರೆ.
ಈ ಮೊದಲು ಸನ್'ರೈಸರ್ಸ್ ಹೈದರಾಬಾದ್ ನಾಯಕತ್ವಕ್ಕೆ ಶಿಖರ್ ಧವನ್ ಹೆಸರು ಬಲವಾಗಿ ಕೇಳಿಬಂದಿತ್ತು.
ಕೇಪ್'ಟೌನ್'ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇವಿಡ್ ವಾರ್ನರ್ ಸೇರಿದಂತೆ ಸ್ಮಿತ್ ಹಾಗೂ ಬ್ಯಾಂಕ್ರಾಪ್ಟ್ ಕೂಡಾ ನಿಷೇಧದ ಶಿಕ್ಷೆಗೆ ಗುರಿಯಾಗಿದ್ದಾರೆ.