2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕ್ರೀಡಾಕ್ಷೇತ್ರಕ್ಕೆ ಬಂಪರ್ ಅನುದಾನ ಘೋಷಿಸಿದ ಕರ್ನಾಟಕ ಸಿಎಂನರೇಗಾ ಯೋಜನೆಯಡಿ ಪ್ರತಿ ಗ್ರಾಮಪಂಚಾಯತ್‌ನಲ್ಲಿ 5 ಕೋಟಿ ವೆಚ್ಚದ ಕ್ರೀಡಾ ಅಂಕಣ ನಿರ್ಮಾಣ

ಬೆಂಗಳೂರು(ಫೆ.17): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು 2023-24ನೇ ಸಾಲಿನ ಮುಂಗಡ ಪತ್ರವನ್ನು ವಿಧಾನಸೌಧದಲ್ಲಿ ಮುಂಡಿಸಿದ್ದಾರೆ. ಬಸವರಾಜ ಬೊಮ್ಮಾಯಿಯವರು ಈ ಬಾರಿ ದಾಖಲೆಯ 3,09,182 ಕೋಟಿ ರುಪಾಯಿ ಮೊತ್ತದ ಬೃಹತ್ ಬಜೆಟ್ ಮಂಡಿಸಿದ್ದು, ಹಲವು ವಲಯಗಳಿಗೆ ಬಂಪರ್ ಅನುದಾನ ಘೋಷಿಸಿದ್ದಾರೆ. ಅದೇ ರೀತಿ ಕ್ರೀಡಾ ಕ್ಷೇತ್ರಕ್ಕೂ ಎಲ್ಲರೂ ಹುಬ್ಬೇರಿಸುವಂತೆ ಯೋಜನೆಗಳನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

Add Asianetnews Kannada as a Preferred SourcegooglePreferred

ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್‌ನಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಗಮನ ಸೆಳೆದ ವಿಚಾರವೆಂದರೆ, ಪ್ರತಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತ ಕ್ರೀಡಾ ಅಂಕಣವನ್ನು ನಿರ್ಮಿಸಲು ನರೇಗಾ ಯೋಜನೆಯಡಿ 5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಘೋಷಿಸಿದ್ದಾರೆ. 

2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ:

* ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ, ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಘೋಷಿಸಿದ್ದಾರೆ.

* ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಣಿಯಾಗಿರುವ ಖಾಸಗಿ ಕ್ರೀಡಾಸಂಸ್ಥೆಗಳಿಗೆ 25 ಲಕ್ಷ ರುಪಾಯಿಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುವುದು.

Karnataka Budget 2023-24: ಬೆಂಗಳೂರಿಗೆ 9,698 ಕೋಟಿ ರೂ. ಬಂಪರ್- 110 ಹಳ್ಳಿಗಳಿಗೆ ಕಾವೇರಿ ನೀರು ಲಭ್ಯ

* ಬಾಸ್ಕೆಟ್‌ಬಾಲ್‌ ಮತ್ತು ವಾಲಿಬಾಲ್‌ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸಲಾಗುವುದು.

* ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕನಂದ ಯುವ ಪ್ರಶಸ್ತಿ ನೀಡಲಾಗುವುದು.

* ಒಲಿಂಪಿಕ್ಸ್‌ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರುಪಾಯಿ ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ(Karnataka Olympic Dreem Project Fund) ಸ್ಥಾಪಿಸಲಾಗುವುದು. ಈ ಯೋಜನೆಯಡಿ 12ರಿಂದ 19 ವರ್ಷ ವಯೋಮಾನದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳ ಪ್ರಾಯೋಜನೆ ಮಾಡಲಾಗುವುದು. 

* ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

* ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವ ಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರುಪಾಯಿ ಅನುದಾನ ಮೀಸಲಿಡಲಾಗಿದೆ.