‘ಎ’ ಗುಂಪಿನ ಪಂದ್ಯದಲ್ಲಿ ಆತಿಥೇಯ ತಂಡ ಅಸ್ಸಾಂ ವಿರುದ್ಧ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ.
ಮೈಸೂರು(ಅ.15): ಆಲ್ರೌಂಡರ್ ಕೆ. ಗೌತಮ್ ಮತ್ತು ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ ಅವರ ಶತಕದ ನೆರವಿನಿಂದ ಕರ್ನಾಟಕ ತಂಡ ಅಸ್ಸಾಂ ವಿರುದ್ಧ ರಣಜಿ ಟ್ರೋಫಿಯಲ್ಲಿ ಬೃಹತ್ ಮುನ್ನಡೆಯತ್ತ ಹೆಜ್ಜೆ ಹಾಕಿದೆ.
ಇಲ್ಲಿನ ಗಂಗೋತ್ರಿ ಗ್ಲೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ‘ಎ’ ಗುಂಪಿನ ಪಂದ್ಯದಲ್ಲಿ ಆತಿಥೇಯ ತಂಡ ಅಸ್ಸಾಂ ವಿರುದ್ಧ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಮೊದಲ ದಿನ ಎದುರಾಳಿಯನ್ನು ಕೇವಲ 145 ರನ್‌ಗೆ ಆಲೌಟ್ ಮಾಡಿ ಬಳಿಕ ದಿನದಂದತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 77 ರನ್ ಗಳಿಸಿದ್ದ ಕರ್ನಾಟಕ 2ನೇ ದಿನದಾಂತ್ಯಕ್ಕೆ 282 ರನ್'ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಸ್ಕೋರ್
ಕರ್ನಾಟಕ ಮೊದಲ ಇನ್ನಿಂಗ್ಸ್ 427/6 (ಸಮರ್ಥ್ 123, ಗೌತಮ್ 147, ಬಿನ್ನಿ 41, ಅರುಪ್ ದಾಸ್ 3-101, ಸರುಪಂ 3-80), ಅಸ್ಸಾಂ ಮೊದಲ ಇನ್ನಿಂಗ್ಸ್ 145/10
