2018ರ ವಿಜಯ್ ಹಜಾರೆ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟಗೊಂಡಿದ್ದು,15 ಸದಸ್ಯರ ತಂಡವನ್ನು ಶುಕ್ರವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪ್ರಕಟಿಸಿದೆ. ವಿನಯ್ ಕುಮಾರ್ ನಾಯಕರಾಗಿ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.

ಬೆಂಗಳೂರು:(ಸೆ.14): 2018ರ ವಿಜಯ್ ಹಜಾರೆ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟಗೊಂಡಿದ್ದು,15 ಸದಸ್ಯರ ತಂಡವನ್ನು ಶುಕ್ರವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪ್ರಕಟಿಸಿದೆ. ವಿನಯ್ ಕುಮಾರ್ ನಾಯಕರಾಗಿ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದವರ್ಷ ಗಾಯದ ಸಮಸ್ಯೆಯಿಂದಾಗಿ ವಿನಯ್ ಬಹುತೇಕ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು. ಇದೇ ಸೆಪ್ಟೆಂಬರ್ 19ರಿಂದ ಪಂದ್ಯಾವಳಿ ಆರಂಭಗೊಳ್ಳಲಿದ್ದು, ಕರ್ನಾಟಕ ತಂಡ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ರಾಜ್ಯ ತಂಡ ತನ್ನೆಲ್ಲಾ ಪಂದ್ಯಗಳನ್ನು ಬೆಂಗಳೂರಿನಲ್ಲೇ ಆಡಲಿದ್ದು, ಬಲಿಷ್ಠ ಮುಂಬೈ, ಪಂಜಾಬ್, ವಿದರ್ಭ ಸವಾಲನ್ನು ಎದು ರಿಸಬೇಕಿದೆ. ಜತೆಗೆ ಗೋವಾ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ರೈಲ್ವೇಸ್ ತಂಡಗಳು ಸಹ ‘ಎ’ ಗುಂಪಿನಲ್ಲಿವೆ. ಅ.8ರ ವರೆಗೂ ಗುಂಪು ಹಂತ ನಡೆಯಲಿದೆ. 

ತಂಡ ಇಂತಿದೆ: ವಿನಯ್ ಕುಮಾರ್ (ನಾಯಕ), ಮಯಾಂಕ್ ಅಗರ್‌ವಾಲ್, ಆರ್.ಸಮರ್ಥ್, ಕರುಣ್ ನಾಯರ್, ಪವನ್ ದೇಶಪಾಂಡೆ, ಸ್ಟುವರ್ಟ್ ಬಿನ್ನಿ, ಸಿ.ಎಂ.ಗೌತಮ್, ಕೆ.ಗೌತಮ್, ಶ್ರೇಯಸ್ ಗೋಪಾಲ್, ಅಭಿಮನ್ಯು ಮಿಥುನ್, ಪ್ರಸಿದ್ಧ್ ಕೃಷ್ಣ, ಜೆ.ಸುಚಿತ್, ಅಭಿಷೇಕ್ ರೆಡ್ಡಿ, ನವೀನ್ ಎಂ.ಜಿ, ಶರತ್ ಬಿ.ಆರ್. ಎರ್ರೆ ಗೌಡ ತಂಡದ ಕೋಚ್ ಆಗಿದ್ದರೆ, ಎಸ್.ಅರವಿಂದ್ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.