ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತಾ ನೈಟ್'ರೈಡರ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್'ಗಳಿಂದ ಸೋಲೊಪ್ಪಿಕೊಂಡಿತು.
ಬೆಂಗಳೂರು(ಮೇ.20): 10ನೇ ಆವೃತ್ತಿಯ ಐಪಿಎಲ್ ಆರಂಭದಿಂದಲೂ ತಮ್ಮ ತಂಡವನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಕೋಲ್ಕತಾ ನೈಟ್'ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಎರಡನೇ ಪ್ಲೇ-ಆಫ್'ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಗಂಭೀರ್, ನಮ್ಮ ಐಪಿಎಲ್ ಪಯಣದಲ್ಲಿ ಜತೆಗಿದ್ದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತಾ ನೈಟ್'ರೈಡರ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್'ಗಳಿಂದ ಸೋಲೊಪ್ಪಿಕೊಂಡಿತು.