ಕೋಲ್ಕತಾ(ಏ.19): ಸೋಲಿನಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ  ಹೋರಾಟ ನಡೆಸಲಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ  KKR ಫೀಲ್ಡಿಂಗ್ ಆಯ್ಕೆ ಮಾಡಿದೆ.  RCB ಸ್ಟಾರ್ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಇಂದಿನ ಪಂದ್ಯ ಅಲಭ್ಯರಾಗಿದ್ದಾರೆ. ಎಬಿಡಿ ಬದಲು ಹೆನ್ರಿಚ್ ಕ್ಲಾಸಿನ್ ತಂಡ ಸೇರಿಕೊಂಡಿದ್ದರೆ, ಸೌತ್ ಆಫ್ರಿಕಾ ವೇಗಿ ಡೇಲ್ ಸ್ಟೇನ್ ಕೂಡ ತಂಡಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ: ಮಕ್ಕಳೊಂದಿಗೆ ಗಲ್ಲಿ ಕ್ರಿಕೆಟ್ ಆಡಿದ ಐಪಿಎಲ್ ಸ್ಟಾರ್ಸ್!

RCB ಆಡಿದ 8 ಪಂದ್ಯದಲ್ಲಿ 1ರಲ್ಲಿ ಮಾತ್ರ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಸೋಲಿನಿಂದ ಹೊರಬರಲು ಕೊಹ್ಲಿ ಪಡೆ ಸಜ್ಜಾಗಿದೆ. ಇತ್ತ ಕೋಲ್ಕತಾ ನೈಟ್ ರೈಡರ್ಸ್ 8ರಲ್ಲಿ 4 ಪಂದ್ಯ ಗೆದ್ದು ನಾಲ್ಕರಲ್ಲಿ ಸೋಲು ಕಂಡಿದೆ. ಹೀಗಾಗಿ 6ನೇ ಸ್ಥಾನದಲ್ಲಿದೆ.