ಮಾಜಿ ಕ್ರಿಕೆಟಿಗನ ಚಿಕಿತ್ಸೆಗೆ ನೆರವಾದ ಕೆ.ಎಲ್.ರಾಹುಲ್!
ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇಕಬ್ ಮಾರ್ಟಿನ್ ಚಿಕಿತ್ಸೆಗೆ ಕನ್ನಡಿಗ ಕೆ.ಎಲ್.ರಾಹುಲ್ ನೆರವಾಗಿದ್ದಾರೆ. ಕಳೆದ 1 ತಿಂಗಳಿನಿಂದ ಆಸ್ಪತ್ರೆಯಲ್ಲಿರುವ ಜೇಕಬ್‌ಗೆ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಬರೋಡಾ(ಫೆ.08): 2018ರ ಡಿ.28ರಂದು ಅಪಘಾತಕ್ಕೀಡಾಗಿ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತ ತಂಡದ ಮಾಜಿ ಕ್ರಿಕೆಟಿಗ ಜೇಕಬ್ ಮಾರ್ಟಿನ್‌ಗೆ ಕರ್ನಾಟಕದ ಕ್ರಿಕೆಟಿಗ ಕೆ.ಎಲ್.ರಾಹುಲ್ ಸಹಾಯ ಹಸ್ತ ಚಾಚಿದ್ದಾರೆ. ಈ ಮೂಲಕ ಮತ್ತೊರ್ವ ಕ್ರಿಕೆಟಿಗ ಜೇಕಬ್ ಮಾರ್ಟಿನ್ ಸಹಾಯಕ್ಕೆ ಧಾವಿಸಿದ್ದಾರೆ.
ಇದನ್ನೂ ಓದಿ: ಮಾಜಿ ಕ್ರಿಕೆಟಿಗನಿಗೆ ಅಪಘಾತ- ನೆರವಿಗೆ ದಾವಿಸಿದ ಟೀಂ ಇಂಡಿಯಾ ದಿಗ್ಗಜರು!
ಮಾರ್ಟಿನ್ ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎನ್ನುವ ವಿಷಯ ತಿಳಿಯುತ್ತಿದ್ದಂತೆ ರಾಹುಲ್, ಬರೋಡಾ ಕ್ರಿಕೆಟಿಗನ ಕುಟುಂಬವನ್ನು ಸಂಪರ್ಕಿಸಿದ್ದಾರೆ. ಅದೇ ದಿನ ಮಾರ್ಟಿನ್ ಖಾತೆಗೆ ದೊಡ್ಡ ಮೊತ್ತದ ಹಣ ಜಮೆ ಮಾಡಲಾಗಿದೆ ಎಂದು ವರದಿಯಾಗಿದೆ. ಹಣ ಸಹಾಯ ಪಡೆದಿರುವುದಾಗಿ ಮಾರ್ಟಿನ್ ಕುಟುಂಬ ಸ್ಪಷ್ಟಪಡಿಸಿದೆಯಾದರೂ ಎಷ್ಟುಹಣ ನೀಡಿದ್ದಾರೆ ಎನ್ನುವುದನ್ನು ಬಹಿರಂಗ ಪಡಿಸಿಲ್ಲ.
ಬಿಸಿಸಿಐ, ಬರೋಡಾ ಕ್ರಿಕೆಟ್ ಸಂಸ್ಥೆ, ಸೌರವ್ ಗಂಗೂಲಿ ಕೂಡ ಆರ್ಥಿಕ ಸಹಾಯ ಮಾಡಿದ್ದಾರೆ. ಇದರ ಜೊತೆಗೆ ಮಾಜಿ ವೇಗಿ ಜಹೀರ್ ಖಾನ್, ಇರ್ಫಾನ್ ಪಠಾಣ್, ಯುಸೂಫ್ ಪಠಾಣ್, ಮುನಾಫ್ ಪಟೇಲ್, ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಕ್ರುನಾಲ್ ಪಾಂಡ್ಯ ಸೇರಿದಂತೆ ಕ್ರಿಕೆಟ್ ದಿಗ್ಗಜರು ನೆರವು ನೀಡಿದ್ದಾರೆ. ಇಷ್ಟೇ ಅಲ್ಲ ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ: ಕ್ರಿಕೆಟಿಗರ ಆರ್ಥಿಕ ಸಹಾಯ- ಮಾಜಿ ಕ್ರಿಕೆಟಿಗ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್!
ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ಮಾರ್ಟಿನ್, 10 ಏಕದಿನ ಪಂದ್ಯ ಆಡಿದ್ದಾರೆ. 5 ಪಂದ್ಯ ಗಂಗೂಲಿ ನಾಯಕತ್ವದಲ್ಲಿ ಆಡಿದ್ದರೆ, ಇನ್ನುಳಿದ 5 ಪಂದ್ಯವನ್ನ ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಆಡಿದ್ದರು.