ಸಚಿನ್ ತೆಂಡೂಲ್ಕರ್ ಬಳಿಕ ವಿರಾಟ್ ಕೊಹ್ಲಿಯೇ ಕಿಂಗ್!

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 5, Aug 2018, 3:49 PM IST
kohli achieved number one spot in test ranking After Sachin
Highlights

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬಳಿಕ ವಿಶ್ವ ಕ್ರಿಕೆಟ್‌ನಲ್ಲಿ ಆ ಮಟ್ಟಿಗೆ ದಾಖಲೆ ಹಾಗೂ ಸಾಧನೆಗಳನ್ನ ಮಾಡುತ್ತಿರುವುದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ. ರ‍್ಯಾಂಕಿಂಗ್‌ನಲ್ಲೂ ಸಚಿನ್ ಬಳಿಕ ಇದೀಗ ಕೊಹ್ಲಿ ಪರಂಪರೆ ಮುಂದುವರಿಸಿದ್ದಾರೆ.

ಮುಂಬೈ(ಆ.05): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಬಳಿಕ ಐಸಿಸಿ ರ‍್ಯಾಂಕಿಂಗ್ ಪ್ರಕಟಗೊಂಡಿದೆ. ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಅಬ್ಬರಿಸಿದ ನಾಯಕ ವಿರಾಟ್ ಕೊಹ್ಲಿ ನೂತನ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.

ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಹಿಂದಿಕ್ಕಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿಯನ್ನ ಬಿಸಿಸಿಐ ಅಭಿನಂದಿಸಿದೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬಳಿಕ ಟೆಸ್ಟ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದ ಭಾರತೀಯ ಬ್ಯಾಟ್ಸ್‌ಮನ್ ಕೊಹ್ಲಿ ಎಂದು ಬಿಸಿಸಿಐ ಅಭಿನಂಧಿಸಿದೆ.

 

 

ಭಾರತೀಯ ಬ್ಯಾಟ್ಸ್‌ಮನ್‌ಗಳು ಕೊನೆಯದಾಗಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದು 2011ರಲ್ಲಿ.  2011ರಲ್ಲಿ ಸಚಿನ್ ತೆಂಡೂಲ್ಕರ್ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದ್ದರು. ಬಳಿಕ ಯಾವ ಭಾರತೀಯ ಬ್ಯಾಟ್ಸ್‌ಮನ್‌ಗಳು ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರು. 

ಇದೀಗ ವಿರಾಟ್ ಕೊಹ್ಲಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರಂಭಿಕ ಇನ್ನಿಂಗ್ಸ್‌ನಲ್ಲಿ 149 ಹಾಗೂ 2ನೇ ಇನ್ನಿಂಗ್ಸ್‌ನಲ್ಲಿ 51 ರನ್ ಸಿಡಿಸೋ ಮೂಲಕ ಒಟ್ಟು 200 ರನ್ ದಾಖಲಿಸಿದ್ದರು.

 ಇದನ್ನು ಓದಿ: ಐಸಿಸಿ ನೂತನ ಟೆಸ್ಟ್ ಶ್ರೇಯಾಂಕ ಪ್ರಕಟ..!

loader