ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭವಾದಾಗಿನಿಂದಲೂ ವಿರಾಟ್ ಕೊಹ್ಲಿಯನ್ನು ಗುರಿಯಾಗಿಸಿಕೊಂಡಿರುವ ಆಸ್ಪ್ರೇಲಿಯಾ ಮಾಧ್ಯಮಗಳು, ಇದೀಗ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿ, ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಹೋಲಿಸಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭವಾದಾಗಿನಿಂದಲೂ ವಿರಾಟ್ ಕೊಹ್ಲಿಯನ್ನು ಗುರಿಯಾಗಿಸಿಕೊಂಡಿರುವ ಆಸ್ಪ್ರೇಲಿಯಾ ಮಾಧ್ಯಮಗಳು, ಇದೀಗ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿ, ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಹೋಲಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘‘ವಿರಾಟ್ ಕೊಹ್ಲಿ, ಕ್ರಿಕೆಟ್ ಜಗತ್ತಿನ ಡೊನಾಲ್ಡ್ ಟ್ರಂಪ್ರಂತಾಗಿದ್ದಾರೆ. ತಮ್ಮ ಮುಖ ಉಳಿಸಿಕೊಳ್ಳಲು ಅವರು ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಯತ್ನ ನಡೆಸುತ್ತಿದ್ದಾರೆ. ಮಾತ್ರವಲ್ಲದೆ, ಆಸೀಸ್ ನಾಯಕ ಸ್ಟೀವನ್ ಸ್ಮಿತ್ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ'' ಎಂದು ‘ಡೈಲಿ ಟೆಲಿಗ್ರಾಫ್' ವರದಿ ಮಾಡಿದೆ.

ಅಂದಹಾಗೆ ಸೋಮವಾರವಷ್ಟೇ ವಿರಾಟ್ ಕೊಹ್ಲಿ, ಕೆಲವು ಆಸೀಸ್ ಆಟಗಾರರು ಭಾರತ ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಅವರನ್ನು ಅಗೌರವದಿಂದ ಕಾಣುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು.