ಮೊಹಾಲಿ[ಮೇ.03]: ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಲ್ಲಿ ಮಾಡು ಇಲ್ಲವೇ ಮಡಿ ಎನ್ನುವ ಪರಿಸ್ಥಿತಿಯಲ್ಲಿರುವ ಕೋಲ್ಕತಾ ನೈಟ್’ರೈಡರ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಫೀಲ್ಡಿಂಗ್ ಆಯ್ದುಕೊಂಡಿದೆ. 

ಉಭಯ ತಂಡಗಳು ಆಡಿದ 12 ಪಂದ್ಯಗಳಲ್ಲಿ 5 ಗೆಲುವು ಹಾಗೂ 7 ಸೋಲು ಕಂಡಿದ್ದು ತಲಾ 10 ಅಂಕಗಳನ್ನು ಕಲೆಹಾಕಿದೆ. ಈ ಪಂದ್ಯ ಸೋತವರು ಬಹುತೇಕ ಪ್ಲೇ ಆಫ್ ರೇಸ್’ನಿಂದ ಹೊರಬೀಳಲಿದ್ದು, ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನಡೆಯುವ ಸಾಧ್ಯತೆಯಿದೆ.  

ಕೆಕೆಆರ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇನ್ನು ಪಂಜಾಬ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಆ್ಯಂಡ್ರೋ ಟೈ ಮತ್ತು ಸ್ಯಾಮ್ ಕುರ್ರಾನ್ ತಂಡ ಕೂಡಿಕೊಂಡಿದ್ದಾರೆ.

ತಂಡಗಳು ಹೀಗಿವೆ: