Asianet Suvarna News Asianet Suvarna News

ಬೆಂಗಳೂರಲ್ಲಿ ಕೆಪಿಎಲ್ ಟಿ20 ನೋಡಲು ರೆಡಿಯಾಗಿ..!

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ 3 ಪಂದ್ಯಗಳು(ಆ.15-17) ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್‌ ಹಾಗೂ ಬೆಳಗಾವಿ ಪ್ಯಾಂಥರ್ಸ್‌ ತಂಡಗಳು ಸೆಣಸಲಿವೆ.

KPL 2018 Schedule M Chinnaswamy Stadium set to host the first match

ಬೆಂಗಳೂರು(ಜು.31]: ಆಗಸ್ಟ್ 15 ರಿಂದ ಆರಂಭವಾಗಲಿರುವ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) 7ನೇ ಆವೃತ್ತಿಯ ವೇಳಾಪಟ್ಟಿ ಸೋಮವಾರ ಪ್ರಕಟಗೊಂಡಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಪಂದ್ಯಗಳನ್ನು ನಡೆಸಲು ನಿರ್ಧರಿಸಲಾಗಿದೆ.

ಇದನ್ನು ಓದಿ: ಕೆಪಿಎಲ್ ಹರಾಜಿನ ಬಳಿಕ 7 ತಂಡಗಳು ಹೇಗಿದೆ? ಇಲ್ಲಿದೆ ಸಂಪೂರ್ಣ ವಿವರ

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ 3 ಪಂದ್ಯಗಳು(ಆ.15-17) ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್‌ ಹಾಗೂ ಬೆಳಗಾವಿ ಪ್ಯಾಂಥರ್ಸ್‌ ತಂಡಗಳು ಸೆಣಸಲಿವೆ.
2ನೇ ಚರಣ ಆ.19-26ರ ವರೆಗೂ ಹುಬ್ಬಳ್ಳಿಯಲ್ಲಿ ನಡೆದರೆ, ಆ.28-ಸೆ.6ರ ವರೆಗೂ ನಡೆಯಲಿರುವ ಅಂತಿಮ ಚರಣಕ್ಕೆ ಮೈಸೂರು ಆತಿಥ್ಯ ವಹಿಸಲಿದೆ.  ಸೆ.3ಕ್ಕೆ ಲೀಗ್ ಹಂತ ಮುಕ್ತಾಯಗೊಳ್ಳಲಿದ್ದು, ಸೆ.4 ಹಾಗೂ ಸೆ.5ರಂದು ಸೆಮಿಫೈನಲ್ಸ್, ಸೆ.6ಕ್ಕೆ ಫೈನಲ್ ಪಂದ್ಯ ನಡೆಯಲಿದೆ.

ಇದನ್ನು ಓದಿ: ಗರಿಷ್ಠ ಮೊತ್ತಕ್ಕೆ ಹರಾಜಾದ ಅಭಿಮನ್ಯು ಮಿಥುನ್ ಕೆಪಿಎಲ್‌ ಆಡೋದು ಡೌಟ್

₹50ಕ್ಕೆ ಟಿಕೆಟ್ ಲಭ್ಯ: 

ಬೆಂಗಳೂರಿನಲ್ಲಿ ನಡೆಯಲಿರುವ 3 ಪಂದ್ಯಗಳ ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಖರೀದಿಗೆ ಲಭ್ಯವಿದ್ದು, ಟಿಕೆಟ್ ದರ ₹50ರಿಂದ ₹1000 ವರೆಗೂ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕೌಂಟರ್‌ನಲ್ಲೂ ಟಿಕೆಟ್ ಮಾರಾಟ ನಡೆಸಲಾಗುತ್ತದೆ ಎಂದು ಕೆಎಸ್‌ಸಿಎ ಕಾರ್ಯದರ್ಶಿ ಸುಧಾಕರ್ ರಾವ್ ತಿಳಿಸಿದ್ದಾರೆ.
 

Follow Us:
Download App:
  • android
  • ios