ಬುಲ್ಸ್’ಗೆ ಅಜರುದ್ದೀನ್ ರಾಯಭಾರಿಯಾಗಿ ಆಯ್ಕೆ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 3, Aug 2018, 1:18 PM IST
KPL Mohammad Azharuddin appointed as Bijapur Bulls Brand Ambassador
Highlights

ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿದ್ದ ಬಿಜಾಪುರ ಬುಲ್ಸ್, ಈ ಬಾರಿ ಚಾಂಪಿಯನ್ ಆಗುವ ವಿಶ್ವಾಸವಿದೆ. ‘ಯುವ ಪ್ರತಿಭೆಗಳಿಗೆ ವೇದಿಕೆ ಸೃಷ್ಟಿಸಿರುವ ಕೆಪಿಎಲ್ ಉತ್ತಮವಾಗಿ ಮೂಡಿಬರುತ್ತಿದೆ. ನನ್ನನ್ನು ರಾಯಭಾರಿಯಾಗಿ ಗುರುತಿಸಿದ್ದರಿಂದ ಖುಷಿಯಾಗಿದೆ’ ಎಂದು ಅಜರುದ್ದೀನ್ ಹೇಳಿದ್ದಾರೆ.

ಬೆಂಗಳೂರು[ಆ.03]: 7ನೇ ಆವೃತ್ತಿಯ ಕೆಪಿಎಲ್ (ಕರ್ನಾಟಕ ಪ್ರೀಮಿಯರ್ ಲೀಗ್)ನ ಬಿಜಾಪುರ ಬುಲ್ಸ್ ತಂಡದ ಪ್ರಚಾರ ರಾಯಭಾರಿಯಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ನೇಮಕಗೊಂಡಿದ್ದಾರೆ. 

ಆಗಸ್ಟ್ 15ರಿಂದ ಸೆಪ್ಟೆಂಬರ್ 6 ರವರೆಗೆ ಪಂದ್ಯಾವಳಿ ನಡೆಯಲಿದೆ. ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿದ್ದ ಬಿಜಾಪುರ ಬುಲ್ಸ್, ಈ ಬಾರಿ ಚಾಂಪಿಯನ್ ಆಗುವ ವಿಶ್ವಾಸವಿದೆ. ‘ಯುವ ಪ್ರತಿಭೆಗಳಿಗೆ ವೇದಿಕೆ ಸೃಷ್ಟಿಸಿರುವ ಕೆಪಿಎಲ್ ಉತ್ತಮವಾಗಿ ಮೂಡಿಬರುತ್ತಿದೆ. ನನ್ನನ್ನು ರಾಯಭಾರಿಯಾಗಿ ಗುರುತಿಸಿದ್ದರಿಂದ ಖುಷಿಯಾಗಿದೆ’ ಎಂದು ಅಜರುದ್ದೀನ್ ಹೇಳಿದ್ದಾರೆ.

ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯು ಆಗಸ್ಟ್ 15ರಂದು ಚಿನ್ನಸ್ವಾಮಿ ಮೈದಾನದಲ್ಲಿ ಆರಂಭವಾಗಲಿದ್ದು, ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಬೆಳಗಾವಿ ಪ್ಯಾಂಥರ್ಸ್ ತಂಡಗಳು ಮುಖಾಮುಖಿಯಾಗಲಿವೆ.

loader