Asianet Suvarna News Asianet Suvarna News

ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೆರವು; ಅಭಿಯಾನದಲ್ಲಿ ಕೊಹ್ಲಿ, ಶಾಸ್ತ್ರಿ!

ಕರ್ನಾಟಕದಲ್ಲಿ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಲ್ಲಿ ಪುನರ್ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಪ್ರವಾಹದಲ್ಲಿ ಕೊಚ್ಚಿ ಹೋದವರಿಗೆ ಹೊಸ ಬದುಕು ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ಇದೀಗ ನೆರ ಪರಿಹಾರ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಮಹತ್ವದ ಕಾರ್ಯಕ್ರಮಕ್ಕೆ ಟೀಂ ಇಂಡಿಯಾ ಕೂಡ ಕೈಜೋಡಿಸಿದೆ.

KSCA donate funds to rebuild Karnataka from flood at chinnaswamy bengaluru
Author
Bengaluru, First Published Sep 22, 2019, 6:55 PM IST

ಬೆಂಗಳೂರು(ಸೆ.22): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯಕ್ಕೂ ಮುನ್ನ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ನೆರವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಾ. ಅಶ್ವತ್‌ನಾರಾಯಣ ಹಾಗೂ, ಸಚಿವ ಬಸವರಾಜ್ ಬೊಮ್ಮಾಯಿ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕೋಚ್ ರವಿ ಶಾಸ್ತ್ರಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

KSCA donate funds to rebuild Karnataka from flood at chinnaswamy bengaluru

ಇದನ್ನೂ ಓದಿ: #INDvSA 3ನೇ ಟಿ20: ಟಾಸ್ ಗೆದ್ದ ಭಾರತ ಬ್ಯಾಟಿಂಗ್

ನರೆ ಸಂತ್ರಸ್ತರ ಪರಿಹಾರ ಅಭಿಯಾನದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹಸ್ತಾಂತರಿಸಿತು. ಇನ್ನು ಪೆಟಿಎಂ ಸಂಗ್ರಹಿಸಿದ 70 ಲಕ್ಷ ರೂಪಾಯಿ ಚೆಕ್‌ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು. 

KSCA donate funds to rebuild Karnataka from flood at chinnaswamy bengaluru

 

ಇದನ್ನೂ ಓದಿ: #INDvSA ಟಿ20 ಪಂದ್ಯಕ್ಕೆ ಯಡಿಯೂರಪ್ಪ; ಅಭಿಮಾನಿಗಳಲ್ಲಿ ವಿಶೇಷ ಮನವಿ !

ಈ ವೇಳೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ನೆರೆ ಸಂತ್ರಸ್ತರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪರಿಹಾರ ನೀಡಿರುವುದು ಹಲವರ ಬಾಳಿಗೆ ಬೆಳಕಾಗಿದೆ. ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಧನ್ಯವಾದ ಅರ್ಪಿಸುತ್ತೇನೆ. ಇನ್ನು ಅಭಿಯಾನಕ್ಕೆ ಕೈಜೋಡಿಸಿದ ನಾಯಕ ವಿರಾಟ್ ಕೊಹ್ಲಿ, ಕೋಚ್, ಟೀಂ ಇಂಡಿಯಾ ಹಾಗೂ ಎಲ್ಲರಿಗೂ ಧನ್ಯವಾದ ಹೇಳಿದರು. 

KSCA donate funds to rebuild Karnataka from flood at chinnaswamy bengaluru

Follow Us:
Download App:
  • android
  • ios