KSCA ಚುನಾವಣೆ ಫಲಿತಾಂಶ; ರೋಜರ್ ಬಿನ್ನಿ ಬಣಕ್ಕೆ ಭರ್ಜರಿ ಗೆಲುವು!

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಛೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಬಣ ಭರ್ಜರಿ ಅಂತರದ ಗೆಲುವು ಸಾಧಿಸಿದೆ. 

KSCA election result Roger Binny elected as a President

"

ಬೆಂಗಳೂರು(ಅ.03): ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟರ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ಬಣ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತ ಚುಕ್ಕಾಣಿ ಹಿಡಿದಿದೆ.  ಮಾಜಿ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಬೆಂಬಲಿತ ಬಣವಾಗಿರಿ ಬಿನ್ನಿ ತಂಡ, ಎದುರಾಳಿ ಎಂಎಂ. ಹರೀಶ್ ಬಣ ಸೋಲಿಸಿ ಗೆಲುವು ಸಾಧಿಸಿತು. 

ಇದನ್ನೂ ಓದಿ:  ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೆರವು; ಅಭಿಯಾನದಲ್ಲಿ ಕೊಹ್ಲಿ, ಶಾಸ್ತ್ರಿ!

2013ರಲ್ಲಿ ಕೊನೆಯದಾಗಿ ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಚುನಾವಣೆ ನಡೆದಿತ್ತು. ಬಳಿಕ ಲೋಧ ಶಿಫಾರಸು ಬಳಿಕ ನಡೆದ ಮೊದಲ ಚುನಾವಣೆ ಇದಾಗಿದ್ದು, 1983ರ ವಿಶ್ವಕಪ್ ವಿಜೇಯ ತಂಡದ ಸದಸ್ಯ ರೋಜರ್ ಬಿನ್ನಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ಬಿನ್ನಿ 943 ಮತ ಪಡೆದರೆ, ಹರೀಶ್ 111 ಮತ ಪಡೆದು ಸೋಲೊಪ್ಪಿಕೊಂಡಿದ್ದಾರೆ.

KSCA ಉಪಾಧ್ಯಕ್ಷ ಸ್ಥಾನಕ್ಕೆ ಬ್ರಿಜೇಶ್ ಪಟೇಲ್ ಬಣದ ಜೆ ಅಭಿರಾಮ್ 885 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಂತೋಶ್ ಮೆನನ್ 810 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿ ಶಾರ್ವಿರ್ ತಾರಾಪೂರ್ 810 ಮತ ಪಡೆದು ಗೆಲುವಿನ ನಗೆ ಬೀರಿದ್ದಾರೆ.

KSCA ಮಾಧ್ಯಮ  ವಕ್ತಾರರಾಗಿ ಜನಪ್ರಿಯವಾಗಿರುವ ವಿನಯ್ ಮೃತ್ಯುಂಜಯ್ 801 ಮತಗಳಿಸೋ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. 
 

Latest Videos
Follow Us:
Download App:
  • android
  • ios