ಪೇಸ್ 42ರಲ್ಲಿ ಗ್ರ್ಯಾಂಡ್ ಸ್ಲಾಂ ಗೆಲ್ಲೋದಾದ್ರೆ ನಾನ್ಯಾಕೆ ಕ್ರಿಕೆಟ್ ಆಡಬಾರದು: ಶ್ರೀಶಾಂತ್!

ವಿವಾದಿತ ವೇಗಿ ಶ್ರೀಶಾಂತ್ ಪರ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆ, ಶ್ರೀ ಸಂತಸದಲ್ಲಿ ತೇಲಾಡಿದ್ದಾರೆ. ಮತ್ತೆ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲು ತಯಾರಿ ಆರಂಭಿಸಿದ್ದಾರೆ. ಸುಪ್ರೀಂ ತೀರ್ಪಿನ ಬಳಿಕ ಶ್ರೀಶಾಂತ್ ಹೇಳಿದ್ದೇನು? ಇಲ್ಲಿದೆ ವಿವರ.
 

Leander Paes can win Grand Slams at 42  I can play some cricket at 36 says sreesanth

ದೆಹಲಿ(ಮಾ.15): ಸ್ಫಾಟ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐನಿಂದ ಅಜೀವ ನಿಷೇಧಕ್ಕೊಳಗಾಗಿದ್ದ ವೇಗಿ ಶ್ರೀಶಾಂತ್‌ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಶ್ರೀಶಾಂತ್ ಮೇಲಿನ ಶಿಕ್ಷೆಯನ್ನು ಪುನರ್ ಪರಿಶೀಲಿಸಲು ಬಿಸಿಸಿಐಗೆ ಸೂಚಿಸಿದೆ. ಸುಪ್ರೀಂ ತೀರ್ಪು ಹೊರಬೀಳುತ್ತಿದ್ದಂತೆ ಸಂತಸ ವ್ಯಕ್ತಪಡಿಸಿರುವ ಶ್ರೀಶಾಂತ್, 42ರ ಹರೆಯದಲ್ಲಿ ಲಿಯಾಂಡರ್ ಪೇಸ್ ಗ್ರ್ಯಾಂಡ್ ಸ್ಲಾಂ ಗೆಲ್ಲೋದಾದರೆ, 36ರ ಹರೆಯದಲ್ಲಿರುವ ನಾನು ಕ್ರಿಕೆಟ್ ಆಡಲು ಶಕ್ತ ಎಂದಿದ್ದಾರೆ.

ಇದನ್ನೂ ಓದಿ: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ರದ್ದು ಮಾಡಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ತೀರ್ಪನ್ನು ಬಿಸಿಸಿಐ ಗೌರವಿಸುತ್ತೆ ಎಂದು ನಾನು ಭಾವಿಸಿದ್ದೇನೆ. ಕಳೆದ 6 ವರ್ಷಗಳಿಂದ ನಾನು ಕ್ರಿಕೆಟ್ ಆಡಿಲ್ಲ. ಮೈದಾನ ಪ್ರವೇಶಿಸಲು ಅವಕಾಶ ನೀಡಿಲ್ಲ. ಈಗ ನನಗೆ ಸ್ಕೂಲ್ ಕ್ರಿಕೆಟ್ ಮೈದಾನಕ್ಕೆ ಹೆಜ್ಜೆ ಇಡುವ ಅವಕಾಶವನ್ನಾದರೂ ಬಿಸಿಸಿಐ ನೀಡಬಹುದು ಎಂದು ಭಾವಿಸಿದ್ದೇನೆ. ಸದ್ಯ ನನಗೆಷ್ಟು ಸಾಧ್ಯವೋ ಅಷ್ಟು ಕ್ರಿಕೆಟ್ ಆಡಲು ಅವಕಾಶ ನೀಡಬೇಕು ಎಂದು ಶ್ರೀಶಾಂತ್ ಹೇಳಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ದ ಟೀಂ ಇಂಡಿಯಾ ಕ್ರಿಕೆಟಿಗ !

ವಯಸ್ಸು ಮುಖ್ಯವಲ್ಲ. ನಾನು ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲು ಎಲ್ಲಾ ಪ್ರಯತ್ನ ಮಾಡುತ್ತೇನೆ. ಕೊನೆ ಪಕ್ಷ ರಾಜ್ಯ ತಂಡವನ್ನಾದರೂ ಸೇರಿಕೊಳ್ಳುವ ಹೋರಾಟ ಮಾಡುತ್ತೇನೆ ಎಂದು ಶ್ರೀಶಾಂತ್ ಹೇಳಿದ್ದಾರೆ. 2007 ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ತಂಡದ ಸದಸ್ಯನಾಗಿದ್ದ ಶ್ರೀಶಾಂತ್ ಟೀಂ ಇಂಡಿಯಾದ ಮೋಸ್ಟ್ ಅಗ್ರೆಸ್ಸೀವ್ ವೇಗಿ ಎಂದೇ ಗುರುತಿಸಿಕೊಂಡಿದ್ದರು.
 

Latest Videos
Follow Us:
Download App:
  • android
  • ios