18ರ ಪೋರ ಪೃಥ್ವಿ ಶಾ ತಮ್ಮ ಪಾದಾರ್ಪಣೆ ಪಂದ್ಯದಲ್ಲೇ ಸೆಂಚುರಿ ಬಾರಿಸಿ ದಾಖಲೆ ಬರೆದಿದ್ದಾರೆ. ವೆಸ್ಟ್ಇಂಡೀಸ್ ವಿರುದ್ದದ ಪಂದ್ಯದಲ್ಲಿ ಶಾ ಬ್ಯಾಟಿಂಗ್ ಪ್ರದರ್ಶನಕ್ಕೆ ಸಚಿನ್ ತೆಂಡೂಲ್ಕರ್, ಜಹೀರ್ ಖಾನ್ , ಶೋಯಿಬ್ ಅಕ್ತರ್ ಸೇರಿದಂತೆ ದಿಗ್ಗಜ ಕ್ರಿಕೆಟಿಗರು ಹೇಳಿದ್ದೇನು? ಇಲ್ಲಿದೆ.
ರಾಜ್‌ಕೋಟ್(ಅ.04): ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪಾದಾರ್ಪಣೆ ಮಾಡಿದ ಪೃಥ್ವಿ ಶಾ ಭರ್ಜರಿ ಸೆಂಚುರಿ ಬಾರಿಸಿ ದಾಖಲೆ ಬರೆದಿದ್ದಾರೆ. ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ ಶಾ ಸಾಧನೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂಜದ್ಯದಲ್ಲಿ ಪೃಥ್ವಿ ಶಾ 154 ಎಸೆತದಲ್ಲಿ 19 ಬೌಂಡರ್ ನೆರವಿನಿಂದ 134 ರನ್ ಸಿಡಿಸಿದರು. ವಿಂಡೀಸ್ ಬೌಲರ್‌ಗಳ ವಿರುದ್ದ ದಿಟ್ಟ ಹೋರಾಟ ನೀಡಿದ ಶಾ ಪ್ರದರ್ಶನಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಕ್ರಿಕೆಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
