ಜನವರಿ 5ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗುತ್ತಿದ್ದು, ಒಂದುವೇಳೆ ಧವನ್ ಮೊದಲ ಪಂದ್ಯದಿಂದ ಹೊರಗುಳಿದರೆ, ಕನ್ನಡಿಗ ಕೆ.ಎಲ್ ರಾಹುಲ್ ಮುರುಳಿ ವಿಜಯ್ ಅವರೊಂದಿಗೆ ಇನಿಂಗ್ಸ್ ಆರಂಭಿಸಲಿದ್ದಾರೆ.

ಮುಂಬೈ(ಡಿ.28): ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್, ಜ.5ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ.

ಇಲ್ಲಿನ ಹೋಟೆಲ್'ನಲ್ಲಿದ್ದ ವೇಳೆ ಧವನ್ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ ಎಂದು ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾತ್ ಹೇಳಿದ್ದಾರೆ. ಧವನ್ ಕಾಲಿನ ಸ್ಕ್ಯಾನ್ ಮಾಡಲಾಗಿದ್ದು, ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ಗಾಯದ ತೀವ್ರತೆ ನೋಡಿಕೊಂಡು ಅವರನ್ನು ಮೊದಲ ಟೆಸ್ಟ್‌'ನಲ್ಲಿ ಆಡಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಜನವರಿ 5ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗುತ್ತಿದ್ದು, ಒಂದುವೇಳೆ ಧವನ್ ಮೊದಲ ಪಂದ್ಯದಿಂದ ಹೊರಗುಳಿದರೆ, ಕನ್ನಡಿಗ ಕೆ.ಎಲ್ ರಾಹುಲ್ ಮುರುಳಿ ವಿಜಯ್ ಅವರೊಂದಿಗೆ ಇನಿಂಗ್ಸ್ ಆರಂಭಿಸಲಿದ್ದಾರೆ.