ರಾಂಚಿ[ಮೇ.06]: ದೇಶಾದ್ಯಂತ ಇಂದು ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ನಡೆಯುತ್ತಿದೆ. ದೇಶದ 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ತಮ್ಮ ನೆಚ್ಚಿನ ನಾಯಕರನ್ನು ಆರಿಸುವ ನಿಟ್ಟಿನಲ್ಲಿ ಮತದಾರರು ಮತಚಲಾಯಿಸುತ್ತಿದ್ದಾರೆ.

ಗೆಲುವಿನ ಬಳಿಕ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ನೀಡಿದ ಧೋನಿ!

ಇನ್ನು ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಪತ್ನಿ ಸಾಕ್ಷಿ ಸಿಂಗ್ ಕೂಡಾ ಮತ ಚಲಾಯಿಸುವ ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ. ಇದೇ ವೇಳೆ ಧೋನಿ ಪುತ್ರಿ ಝಿವಾ ಮತದಾರರಿಗೆ ’ವೋಟ್’ ಮಾಡಿ ಎಂದು ಮನವಿ ಮಾಡಿದ್ದಾಳೆ. ನಮ್ಮ ಅಪ್ಪ ಹಾಗೂ ಅಮ್ಮ ಮತ ಹಾಕಿದಂತೆ, ನೀವು ಮತಗಟ್ಟೆಗೆ ಹೋಗಿ ವೋಟ್ ಮಾಡಿ ಎಂದು ಝಿವಾ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

IPL ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ CSK

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಿದ್ದು, ನಾಲ್ಕನೇ ಕಪ್ ಗೆಲ್ಲುವ ಕನವರಿಕೆಯಲ್ಲಿದೆ. CSK ತಂಡವು ಆಡಿದ 10 ಆವೃತ್ತಿಗಳಲ್ಲೂ ಪ್ಲೇ ಆಫ್ ಪ್ರವೇಶಿಸಿದ ಏಕೈಕ ತಂಡ ಎನ್ನುವ ಕೀರ್ತಿಗೂ ಪಾತ್ರವಾಗಿದೆ.  

ಕ್ರೀಡೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ...