ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರತಿಯೊಬ್ಬ ಬ್ಯಾಟ್ಸ್‌ಮನ್ ಪ್ರದರ್ಶನ ಕಳಪೆಯಾಗಿತ್ತು. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಕೂಡ ಹೊರತಾಗಿಲ್ಲ. ಆದರೆ ಟೀಂ ಇಂಡಿಯಾ ಕ್ರಿಕೆಟಿಗರಿಗಿಂತ ತೀರಾ ಕಳಪೆ ಪ್ರದರ್ಶನ ನೀಡಿದ ಅಪಖ್ಯಾತಿ ಇಂಗ್ಲೆಂಡ್ ಕ್ರಿಕೆಟಿಗನ ಪಾಲಾಗಿದೆ. ಆತ ಯಾರು? ಇಲ್ಲಿದೆ.

ಲಂಡನ್(ಆ.13): ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರದರ್ಶನ ತೀರಾ ಕಳಪೆಯಾಗಿತ್ತು ಅನ್ನೋದನ್ನ ಬಿಡಿಸಿ ಹೇಳಬೇಕಾಗಿಲ್ಲ. ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲಾ ಘಟಾನುಘಟಿ ಬ್ಯಾಟ್ಸ್‌ಮನ್‌ಗಳು ದಿಟ್ಟ ಹೋರಾಟ ನೀಡದೇ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್ ಅನ್ನೋ ಅಪಖ್ಯಾತಿಗೆ ದಿನೇಶ್ ಕಾರ್ತಿಕ್ ಗುರಿಯಾಗಿದ್ದಾರೆ. ಕಾರ್ತಿಕ್ ಮೊದಲ ಇನ್ನಿಂಗ್ಸ್‌ನಲ್ಲಿ 1 ಹಾಗೂ 2ನೇ ಇನ್ನಿಂಗ್ಸ್‌ನಲ್ಲಿ ಡಕೌಟ್ ಆಗಿದ್ದರು. ಆದರೆ ಕಾರ್ತಿಕ್‌ಗಿಂತ ಕಳರೆ ಪ್ರದರ್ಶನ ನೀಡಿದ್ದು ಇಂಗ್ಲೆಂಡ್ ಕ್ರಿಕೆಟಿಗ.

ಒಂದು ಓವರ್ ಬೌಲಿಂಗ್ ಮಾಡಿಲ್ಲ, 1 ರನ್ ಕೂಡ ಸಿಡಿಸಿಲ್ಲ, ಇನ್ನು ಒಂದೇ ಒಂದು ಕ್ಯಾಚ್ ಹಿಡಿದಿಲ್ಲ. ಇದು ಬೇರೆ ಯಾರೂ ಅಲ್ಲ, ಇಂಗ್ಲೆಂಡ್‌ನ ಸ್ಪಿನ್ನರ್ ಆದಿಲ್ ರಶೀದ್. ರಶೀದ್ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಕೇವಲ ಫೀಲ್ಡಿಂಗ್ ಮಾಡಿದ್ದೇ ಸಾಧನೆ.

ಆದಿಲ್ ರಶೀದ್ ಟೀಂ ಇಂಡಿಯಾ ಕ್ರಿಕೆಟಿಗರಿಗಿಂತ ಕಳಪೆ ಪ್ರದರ್ಶನ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ಕುರಿತು ಇಂಗ್ಲೆಂಡ್ ನಾಯಕ ಜೋ ರೂಟ್ ಸಮರ್ಥನೆ ನೀಡಿದ್ದಾರೆ.

ಆದಿಲ್ ರಶೀದ್ ಅತ್ಯುತ್ತಮ ಸ್ಪಿನ್ನರ್. ಆದರೆ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ರಶೀದ್ ಬೌಲಿಂಗ್ ಮಾಡೋ ಮುನ್ನ ವೇಗಿಗಳು ವಿಕೆಟ್ ಕಬಳಿಸಿದ್ದಾರೆ. ಹೀಗಾಗಿ ರಶೀದ್ ಕಣಕ್ಕಿಳಿಸೋ ಪ್ರಮೇಯ ಬಂದಿಲ್ಲ ಎಂದು ರೂಟ್ ಹೇಳಿದ್ದಾರೆ. ಈ ಮೂಲಕ ಭಾರತೀಯ ಬ್ಯಾಟ್ಸ್‌ಮನ್‌ಗಳು ವೇಗಿಗಳು ಓವರ್ ಮುಗಿಸೋ ಮುನ್ನವೇ ಪೆವಿಲಿಯನ್ ಸೇರಿಕೊಂಡರು ಎಂದಿದ್ದಾರೆ.